Ad imageAd image

ಕುಮಾರ ಬಂಗಾರಪ್ಪ ಮನೆಗೆ ನಟ ಶಿವಣ್ಣ ಅಭಿಮಾನಿಗಳ ಮುತ್ತಿಗೆ

Bharath Vaibhav
ಕುಮಾರ ಬಂಗಾರಪ್ಪ ಮನೆಗೆ ನಟ ಶಿವಣ್ಣ ಅಭಿಮಾನಿಗಳ ಮುತ್ತಿಗೆ
WhatsApp Group Join Now
Telegram Group Join Now

ಬೆಂಗಳೂರು : ಕುಮಾರ ಬಂಗಾರಪ್ಪ ಅವರ ಮನೆಯ ಮುಂದೆ ನಟ ಶಿವರಾಜ್‌ ಕುಮಾರ್‌ ಅವರ ಅಭಿಮಾನಿಗಳು ಪ್ರತಿಭಟನೆ ನಡೆಸಿದ್ದು, ಮನೆಗೆ ಮುತ್ತಿಗೆ ಹಾಕಲು ಯತ್ನಿಸಿರುವ ಘಟನೆ ನಡೆದಿದೆ.

ಬೆಂಗಳೂರಿನ ಸದಾಶಿವನಗರದಲ್ಲಿರುವ ಕುಮಾರಬಂಗಾರಪ್ಪ ನಿವಾಸದ ಮುಂದೆ ನಟ ಶಿವರಾಜ್‌ ಕುಮಾರ್‌ ಅವರ ಅಭಿಮಾನಿಗಳು ಪ್ರತಿಭಟನೆ ನಡೆಸಿದ್ದಾರೆ.ಕುಮಾರಬಂಗಾರಪ್ಪ ಶಿವರಾಜ್‌ ಕುಮಾರ್‌ ಅವರ ಕ್ಷಮೆ ಕೇಳಬೇಕು ಎಂದು ಹೇಳಿ ಅಭಿಮಾನಿಗಳು ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ತಕ್ಷಣವೇ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಗೀತಾ ಶಿವರಾಜ್‌ ಕುಮಾರ್‌ ಸೋಲಿನ ಬೆನ್ನಲ್ಲೇ ಟ್ವೀಟ್‌ ಮಾಡಿದ್ದ ಕುಮಾರ ಬಂಗಾರಪ್ಪ, ನನ್ನ ತಂಗಿಯ ಗಂಡ Dr. ಶಿವರಾಜಕುಮಾರ್ ನಿರುದ್ಯೋಗಿಯಾಗಬೇಕಿಲ್ಲ, ನಮ್ಮೂರ ಜಾತ್ರೆಗಳಲ್ಲಿ ಕುಣಿಯುವ ಕೆಲಸಕ್ಕೆ ಈಗಲೇ ಅರ್ಜಿ ಹಾಕಿಕೊಳ್ಳಬಹುದು. ನನ್ನ ತಂಗಿ ಸಿನಿಮಾ ಡಾನ್ ಆಗಿರುವುದರಿಂದ ಬೇಸರಕ್ಕೆ ಕಾರಣವಿಲ್ಲ.

ದೊಡ್ಡಮನೆಯ ವ್ಯವಹಾರ ಸಾಕಷ್ಟಿರುತ್ತದೆ, ಬೇರೆಯವರಿಗೆ ಅವಕಾಶ ಸಿಗಲಾರದು. ಹೆದರಿಸುವ, ಬೆದರಿಸುವ, ಹುಷಾರ್ ಅನ್ನುವ ಮಾತುಗಳೇನಿದ್ದರೂ ಗಂಟಲೋಳಗೇ, ನಾಲ್ಕು ಗೋಡೆಗಳೊಳಗೆ, ತಮ್ಮ ಪಟಾಲಂ ಮುಂದೆ ಮಾತ್ರ ಚಾಲ್ತಿಯಲ್ಲಿರಬೇಕು. ದಿಕ್ಕು ಗೆಟ್ಟು ದಿಕ್ಕಾಪಾಲಾಗಿ ಹೋಗಿ ಬೆಂಗಳೂರು ಸೇರಿಕೊಂಡವರಿಗೆ ಕೊನೆಯ ಎಚ್ಚರಿಕೆ. ನೀವು ಹಿಂತಿರುಗಿ ಬರುವುದು ಕನಸಿನ ಮಾತು. ಜೈಹಿಂದ್, ಜೈ ಕರ್ನಾಟಕ!” ಎಂದು ಹೇಳಿದ್ದರು.

 

 

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!