ಬೆಂಗಳೂರು : ರಾಜ್ಯ ಸರ್ಕಾರ ಇತ್ತೀಚೆಗೆ ಹಾಲು, ಡೀಸೆಲ್ ಬೆಲೆ ಹೆಚ್ಚಳ ಮಾಡಿದ್ದು, ಜನಾಕ್ರೋಶ ವ್ಯಕ್ತವಾಗಿದೆ.ಈ ಬೆನ್ನಲ್ಲೇ ಮಾಜಿ ಸಿಎಂ ಹಾಗೂ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಬೆಲೆ ಏರಿಕೆ ವಿರುದ್ಧ ವಾಗ್ಧಾಳಿ ನಡೆಸಿದ್ದಾರೆ.
ರಾಜ್ಯ ಸರ್ಕಾರ ಎಲ್ಲಾ ವಸ್ತುಗಳ ಬೆಲೆ ಏರಿಸಿದೆ.ನೀವು ಸುಮ್ಮನೇ ಇದ್ರೆ ನಿಮ್ಮ ಮನೆಯ ಬೆಡ್ ರೂಂಗೂ ರಾಜ್ಯ ಸರ್ಕಾರ ಟ್ಯಾಕ್ಸ್ ಹಾಕಲಿದೆ ಎಂದು ಹೆಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಇತ್ತೀಚೆಗೆ ಸರ್ಕಾರದ ವಿರುದ್ಧ ಕಿಡಿಕಾರಿದ್ದ ಹೆಚ್ಡಿಕೆ ‘ ದಿನಕ್ಕೊಂದು ಸುಳ್ಳು! ತಿಂಗಳಿಗೊಂದು ದರ ಏರಿಕೆ!! ಕರ್ನಾಟಕ ಈಸ್ಟ್ ಇಂಡಿಯಾ ಕಾಂಗ್ರೆಸ್ ಕಂಪನಿ ಸರಕಾರದ ಆಡಳಿತದ ವೈಖರಿ ಇದು. ಇಂದಿನಿಂದ ಕಾಂಗ್ರೆಸ್ ಕಂಪನಿ ಸರಕಾರ ಕಸದ ಮೇಲೆಯೂ ಸೆಸ್ ವಿಧಿಸುತ್ತಿದೆ!! ಎಂದು ಕಿಡಿಕಾರಿದ್ದರು.