ಅಥಣಿ: ಉಗ್ರಗಾಮಿಗಳ ಮಟ್ಟ ಹಾಕಲು ಕೇಂದ್ರ ಸರ್ಕಾರ ಮೊದಲು ಪಾಕ್ ಆಕ್ರಮಿತ ಕಾಶ್ಮೀರವನ್ನು ವಶಪಡಿಸಿಕೊಳ್ಳಬೇಕು. ಪಾಪಿ ಪಾಕಿಸ್ತಾನದ ವಿರುದ್ಧ ಇನ್ನೂ ಕಠಿಣ ಕ್ರಮಕ್ಕೆ ಕೇಂದ್ರ ಸರ್ಕಾರ ಮುಂದಾಗಬೇಕು ಎಂದು ಅಥಣಿ ಶಾಸಕ ಲಕ್ಷ್ಮಣ ಸವದಿ ಹೇಳಿದ್ದಾರೆ.
ಅವರು ಅಥಣಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಡನೆ ಮಾತನಾಡುತ್ತಾ, ಭೂಲೋಕದ ಸ್ವರ್ಗದಂತಿರುವ ಕಶ್ಮೀರದ ಪೆಹೆಲ್ಗಾಮ್ ನಲ್ಲಿ ಉಗ್ರ ಗಾಮಿಗಳು ಅಟ್ಟಹಾಸ ಮೆರೆದದ್ದು 27 ಜನರು ದುರಂತ ಅಂತ್ಯ ಕಂಡಿದ್ದಾರೆ.ಇದು ಇಡಿ ಭಾರತೀಯರಿಗೆ ನೋವು ತಂದಿದೆ. ಕೇಂದ್ರ ಸರ್ಕಾರ ಪಾಕಿಸ್ತಾನದ ವಿರುದ್ಧ ತೆಗೆದುಕೊಂಡ ರಾಜ್ಯ ತಾಂತ್ರಿಕ 5 ನಿರ್ಧಾರಗಳು ಬಹಳ ಪ್ರಮುಖ ಪಾತ್ರ ವಹಿಸುತ್ತದೆ. ಇಂತಹ ಸಂದರ್ಭದಲ್ಲಿ ರಾಜಕೀಯ ಮಾಡುವುದು ಒಳಿತಲ್ಲ ರಾಜ್ಯ ಹಾಗೂ ಕೇಂದ್ರದ ನಾಯಕರು ಒಗ್ಗಟ್ಟಿನಿಂದ ಇದ್ದು ಪಾಪಿ ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಬೇಕು ಎಂದರು.
ವರದಿ: ಅಜಯ್ ಕಾಂಬಳೆ