ಬೆಳಗಾವಿ : ಸುವರ್ಣಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶನದ ವೇಳೆ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅಶ್ಲೀಲ ಪದ ಬಳಕೆ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸೋಮವಾರ ವಿಡಿಯೋ ಸಾಕ್ಷ್ಯ ಬಿಡುಗಡೆ ಮಾಡಿದ್ದಾರೆ.
ಇಂದು ಬೆಳಗ್ಗೆಯಷ್ಟೇ ಸಭಾಪತಿ ಬಸವರಾಜ ಹೊರಟ್ಟಿ, ಪ್ರಕರಣಕ್ಕೂ ನಮಗೂ ಸಂಬಂಧವಿಲ್ಲ .ಇಬ್ಬರ ದೂರನ್ನೂ ಸ್ವೀಕರಿಸಿದ್ದೇನೆ.
ರಾಜಿ ಸಂಧಾನದ ಮೂಲಕ ಪ್ರಕರಣಕ್ಕೆ ತೆರೆಯೆಳೆಯುವಂತೆ ಸಲಹೆ ನೀಡಿದ್ದೇನೆ ಎಂದಿದ್ದರು. ಈ ಬೆನ್ನಲ್ಲೇ ವಿಡಿಯೋ ಬಿಡುಗಡೆ ಮಾಡಿರುವ ಲಕ್ಷ್ಮಿ ಹೆಬ್ಬಾಳ್ಕರ್ ಸಂಧಾನದ ಮಾತೇ ಇಲ್ಲ ಎಂಬ ಸೂಚನೆ ನೀಡಿದ್ದಾರೆ.
ಅಧಿವೇಶನದ ಕೊನೆಯ ದಿನ ಕಲಾಪದ ವೇಳೆ ನಡೆದ ಗದ್ದಲದಲ್ಲಿ ಸಿ.ಟಿ. ರವಿ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ನಡುವೆ ಮಾತಿನ ಚಕಮಕಿ ನಡೆದಿತ್ತು. ಈ ವೇಳೆ ಲಕ್ಷ್ಮೀ ಹೆಬ್ಬಾಳ್ಕರ್ ಕೊಲೆಗಾರ ಎಂದು ನಿಂದಿಸಿದ್ದರೆ, ಸಿ.ಟಿ. ರವಿ ಅಸಾಂವಿಧಾನಿಕ ಪದವೊಂದನ್ನು ಬಳಸಿದ್ದರು.
ಬಳಿಕ ಸಿ.ಟಿ. ರವಿಯವರನ್ನು ಬಂಧಿಸಲಾಗಿತ್ತು. ಹೈಕೋರ್ಟ್ ಆದೇಶದ ಬಳಿಕ ಸಿ.ಟಿ. ರವಿ ಜಾಮೀನು ಪಡೆದು ಬಿಡುಗಡೆಯಾಗಿದ್ದರು.