ಬೆಳಗಾವಿ: ಕಾರು ಅಪಘಾತದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬೆನ್ನು ಮೂಳೆ ಮುರಿದಿದೆ ಎಂದು ವೈದ್ಯ ರವಿ ಪಾಟೀಲ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾರು ಅಪಘಾತದ ನಂತರ ಕಾರಿನಲ್ಲಿದ್ದವರೆಲ್ಲರಿಗೂ ಚಿಕಿತ್ಸೆ ನೀಡಲಾಗಿದೆ. ಪೇನ್ ಕಿಲ್ಲರ್ ಇಂಜೆಕ್ಷನ್ ನೀಡಿ ಸಿಟಿ ಸ್ಕ್ಯಾನ್ ಮಾಡಿದ್ದೇವೆ.
ಈ ವೇಳೆ ಹೆಬ್ಬಾಳ್ಕರ್ ಅವರಿಗೆ ಬೆನ್ನು ಮೂಳೆ ಮುರಿತವಾಗಿರುವುದು ಕಂಡುಬಂದಿದೆ. ಬೆನ್ನಿನ L-1 ಮೂಳೆ ಮುರಿತವಾಗಿದೆ. ಎರಡು ದಿನಗಳ ಬಳಿಕ ಸಚಿವೆ ಹೆಬ್ಬಾಳ್ಕರ್ ಅವರ ಆರೋಗ್ಯದ ಸ್ಥಿತಿ ಪರಿಗಣಿಸಿ ಡಿಸ್ಚಾರ್ಜ್ ಮಾಡಲಾಗುತ್ತದೆ. ಹೆಬ್ಬಾಳ್ಕರ್ ಅವರಿಗೆ ಒಂದು ತಿಂಗಳು ಬೆಡ್ ರೆಸ್ಟ್ ಬೇಕಾಗುತ್ತದೆ ಎಂದರು.
ಅದೇ ರೀತಿ ಚನ್ನರಾಜಟಿಹೊಳಿ ತಲೆಗೆ ಪೆಟ್ಟಾಗಿದ್ದು ಹೆಚ್ಚಿನ ಗಾಯಗಳಾಗಿಲ್ಲ. ಗನ್ ಮ್ಯಾನ್, ಕಾರುಚಾಲಕ ಆಸ್ಪತ್ರೆಗೆ ದಾಖಲಾಗಿದ್ದಾರೆ. ಎಲ್ಲರಿಗೂ ಕೂಡ ಚಿಕಿತ್ಸೆ ನೀಡಿದ್ದೇವೆ. ಎಲ್ಲರೂ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಮಾಹಿತಿ ನೀಡಿದರು.
ಘಟನೆಯೇನು?
ಯಾವುದೋ ಕಾರ್ಯದ ನಿಮಿತ್ತ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ಸಹೋದರ ಬೆಳಗಾವಿಯಿಂದ ಹೋಗುತ್ತಿದ್ದ ವೇಳೆ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಬಳಿ ನಾಯಿಯೊಂದು ಅಡ್ಡ ಬಂದ ಹಿನ್ನಲೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲಿದ್ದ ಮರಕ್ಕೆ ಡಿಕ್ಕಿ ಹೊಡೆದಿದೆ.
ಕಾರು ಡಿಕ್ಕಿಯ ರಭಸಕ್ಕೆ ವಾಹನದ ಮುಂಭಾಗ ಸಂಪೂರ್ಣ ನಜ್ಜು ಗುಜ್ಜಾಗಿದ್ದು, ಕೂಡಲೇ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾ ಖಲಿಸಲಾಗಿದೆ.