ಸಿರುಗುಪ್ಪ : ನಗರದ 18ನೇ ವಾರ್ಡಿನ ಡ್ರೈವರ್ ಕಾಲೋನಿಯಲ್ಲಿ ಕೆ.ಕೆ.ಆರ್.ಡಿ.ಬಿ ಅನುದಾನ 59ಲಕ್ಷ 50ಸಾವಿರ ವೆಚ್ಚದಲ್ಲಿ ಸಿ.ಸಿ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗೆ ಭಾನುವಾರದಂದು ಶಾಸಕ ಬಿ.ಎಮ್.ನಾಗರಾಜ ಅವರು ಭೂಮಿಪೂಜೆ ಸಲ್ಲಿಸಿದರು.
ನಂತರ ಮಾತನಾಡಿ ಕೆ.ಕೆ.ಆರ್.ಡಿ.ಬಿ ಯೋಜನೆಯಲ್ಲಿ ನಗರದ ಹಲವು ವಾರ್ಡ್ ಗಳಲ್ಲಿ ಅಭಿವೃದ್ದಿ ಕಾರ್ಯಗಳನ್ನು ಹಮ್ಮಿಕೊಳ್ಳಲಾಗಿದೆ.
ಇನ್ನಿತರ ವಾರ್ಡ್ ಗಳಲ್ಲಿ ಸಮಸ್ಯೆ ನಿವಾರಿಸಲು ಕಾಮಗಾರಿ ಹಮ್ಮಿಕೊಂಡು ಹಂತ ಹಂತವಾಗಿ ಅಭಿವೃದ್ದಿಯನ್ನು ಮಾಡಲಾಗುವುದು ಎಂದು ತಿಳಿಸಿದರು.
ಇದೇ ವೇಳೆ ನಗರಸಭೆ ಅಧ್ಯಕ್ಷೆ ಬಿ.ರೇಣುಕಮ್ಮ ವೆಂಕಟೇಶ್, ಸದಸ್ಯ ಹೆಚ್.ಗಣೇಶ, ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಎನ್.ಕರಿಬಸಪ್ಪ, ಲೋಕೋಪಯೋಗಿ ಇಲಾಖೆ ಅಧಿಕಾರಿ ವಿ.ಅನಿಲ್‌ಕುಮಾರ್, ಬಿ.ಎಮ್.ಹರ್ಷ ನಾಯಕ ಬಿ.ವೆಂಕಟೇಶ ಸೇರಿದಂತೆ ಇನ್ನಿತರ ಮುಖಂಡರು ಹಾಗೂ ಸ್ಥಳೀಯರು ಇದ್ದರು.
ವರದಿ : ಶ್ರೀನಿವಾಸ ನಾಯ್ಕ




