Ad imageAd image

ಸಂಸದ ಸಾಗರ ಖಂಡ್ರೆ ಹಸ್ತದಿಂದ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ

Bharath Vaibhav
ಸಂಸದ ಸಾಗರ ಖಂಡ್ರೆ ಹಸ್ತದಿಂದ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ
WhatsApp Group Join Now
Telegram Group Join Now

ಗುಣಮಟ್ಟದ ರಸ್ತೆ ನಿರ್ಮಾಣಕ್ಕೆ ಸೂಚನೆ 

ಭಾಲ್ಕಿ : ರೈತರು,ಯುವಕರು ಸೇರಿದಂತೆ ಮತ ಕ್ಷೇತ್ರದ ವ್ಯಾಪ್ತಿಯ ಎಲ್ಲರ ಮತ್ತು ಕ್ಷೇತ್ರದ ಸಮಗ್ರ ಅಭಿವೃದ್ದಿಯೇ ನನ್ನ ಕನಸಾಗಿದೆ. ಆ ಗುರಿಯೊಂದಿಗೆ ಕೆಲಸ ಮಾಡುತ್ತಿರುವುದಾಗಿ ಸಂಸದ ಸಾಗರ ಈಶ್ವರ ಖಂಡ್ರೆ ಹೇಳಿದರು.

ಭಾಲ್ಕಿ ತಾಲ್ಲೂಕಿನ ಹರೇವಾಡಿ ಗ್ರಾಮದಿಂದ ಅಟ್ಟರಗಾ ಗ್ರಾಮದವರೆಗೆ ಪ್ರಧಾನ ಮಂತ್ರಿ ಗ್ರಾಮ ಸಡಕ ಯೋಜನೆ ಅಡಿಯಲ್ಲಿ ಅಂದಾಜು ₹ 3 ಕೋಟಿ 15 ಲಕ್ಷ ವೆಚ್ಚದ ರಸ್ತೆ ನಿರ್ಮಾಣ ಕಾಮಗಾರಿಗೆ ಸಂಸದ ಸಾಗರ ಈಶ್ವರ ಖಂಡ್ರೆ ಸೋಮವಾರ ಹರೇವಾಡಿ ಗ್ರಾಮದಲ್ಲಿ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

ನಂತರ ಮಾತನಾಡಿದ ಅವರು, ‘ಗ್ರಾಮೀಣ ಭಾಗಗಳಿಗೆ ಸಂಪರ್ಕ ಕಲ್ಪಿಸುವ ಉದ್ದೇಶದಿಂದ ಸುಗಮ ಸಂಚಾರ ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಈ ರಸ್ತೆ ನಿರ್ಮಿಸಲಾಗುತ್ತಿದೆ. ಗ್ರಾಮದ ಅಭಿವೃದ್ಧಿಗೆ ಎಲ್ಲರ ಸಹಕಾರ ಅಗತ್ಯ. ನಿಗದಿತ ಸಮಯದಲ್ಲಿ ಗುಣಮಟ್ಟದ ರಸ್ತೆ ನಿರ್ಮಾಣ ಮಾಡಿ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಹೇಳಿದರು.

ಗ್ರಾಮ ಪಂಚಾಯತಿ ಅಧ್ಯಕ್ಷ ಖಂಡು ಕಾಸರ ಮಾತನಾಡಿ,‘ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹಾಗೂ ಸಂಸದ ಸಾಗರ ಖಂಡ್ರೆ ಅವರ ಅವಿರತ ಶ್ರಮದಿಂದ ಇಂದು ತಾಲ್ಲೂಕಿನಲ್ಲಿ ಹಂತ ಹಂತವಾಗಿ ಎಲ್ಲಾ ಕ್ಷೇತ್ರಗಳಲ್ಲಿ ಅಭಿವೃದ್ದಿ ಹೊಂದುತ್ತಿದೆ. ಇವರ ಸಹಕಾರದಿಂದ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಎಲ್ಲ ಹಳ್ಳಿಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಿದ್ದಾರೆ’ ಎಂದು ಹೇಳಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಪ್ರವೀಣ ಹನುಮಶೆಟ್ಟಿ, ಶರದ ಗಂದಗೆ, ಸಾಯಗಾಂವ ಗ್ರಾಮ ಪಂಚಾಯಿತಿ ಅಧ್ಯಕ್ಷ ಸತೀಶ ನಿಂಬಾಳ್ಕರ್ , ಪ್ರಮುಖರಾದ ದಿಲೀಪ್ ಪಾಟಿಲ, ಗಣಪತರಾವ ಪಾಟಿಲ, ಮಾರುತಿ ಮಗರ, ಗಜಾನಂದ ಮೊಳಕೆರೆ , ಹಂಸರಾಜ ಪಾಟಿಲ, ಪ್ರವೀಣ ಸ್ವಾಮಿ , ಗೋಪಾಳ ಸೂರ್ಯವಂಶಿ ಸೇರಿ ವಿವಿಧ ಗ್ರಾಮದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ : ಸಂತೋಷ ಬಿಜಿ ಪಾಟೀಲ

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!