ಭೂಮಿ ಪೂಜೆ ನೆರವೇರಿಸಿದ ಸಚಿವ ಎನ್ ಎಸ್ ಬೋಸರಾಜು ಡಾ.ಶರಣಪ್ರಕಾಶ್ ಪಾಟೀಲ್ ಶಾಸಕ ಹಂಪಯ್ಯ ನಾಯಕ
ರಾಯಚೂರು: ಮಾನ್ವಿ ತಾಲೂಕಿನ ವಿವಿಧ ಸರ್ಕಾರಿ ಇಲಾಖೆಗಳ ಸೌಲಭ್ಯಗಳನ್ನು ಒಂದೇ ಸೂರಿನಡಿಯಲ್ಲಿ ಸಾರ್ವಜನಿಕರಿಗೆ ಸುಲಭವಾಗಿ ತಲುಪಿಸುವ ಉದ್ದೇಶದಿಂದ ಈ ಮಿನಿ ವಿಧಾನಸೌಧವನ್ನು ನಿರ್ಮಾಣ ಮಾಡಲಾಗುತ್ತಿದೆ. ಮಿನಿವಿಧಾನಸೌಧ ನಿರ್ಮಾಣದ ನಂತರ ವಿವಿಧ ಇಲಾಖೆಗಳು ಅಧಿಕಾರಿಗಳು ಒಂದೆಡೆ ಸಿಗುವದರಿಂದ ಸಾರ್ವಜನಿಕರ ಅಲೆದಾಟ ತಪ್ಪುತ್ತದೆ ಎಂದು ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಚಿವರಾದ ಎನ್ ಎಸ್ ಬೋಸರಾಜು ಅವರು ತಿಳಿಸಿದರು.
ಮಾನ್ವಿ ತಾಲೂಕಿನ ಜನತೆಯ ಬಹುದಿನದ ಬೇಡಿಕೆಯಾಗಿದ್ದ ಮಿನಿ ವಿಧಾನಸೌಧ ನಿರ್ಮಾಣದ 10 ಕೋಟಿ ವೆಚ್ಚದ ಕಾಮಗಾರಿಗೆ ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಚಿವರಾದ ಎನ್ ಎಸ್ ಬೋಸರಾಜು ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಶರಣಪ್ರಕಾಶ್ ಪಾಟೀಲ್ ಮಾನ್ವಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹಂಪಯ್ಯ ನಾಯಕ ಅವರು ಜಂಟಿಯಾಗಿ ಮಿನಿವಿಧಾನಸೌಧ ಕಾಮಗಾರಿಯ ಭೂಮಿ ಪೂಜೆಯನ್ನು ನೆರವೇರಿಸಿದರು.

ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಜನಪರ ಯೋಜನೆಗಳ ಮೂಲಕ ಇಂತಹ ಅನೇಕ ಕಾರ್ಯಾಲಯಗಳ ನಿರ್ಮಾಣದ ಮೂಲಕ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದೇವೆ. ಮಾನ್ವಿ ವಿಧಾನಸಭಾ ಕ್ಷೇತ್ರದ ಶೈಕ್ಷಣಿಕ ಸಾಮಾಜಿಕ ಆರ್ಥಿಕ ಸೇರಿದಂತೆ ಸರ್ವಾಂಗಣ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ. ಈ ಮಿನಿವಿಧಾನಸೌಧ ನಿರ್ಮಾಣ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಗುಣಮಟ್ಟದೊಂದಿಗೆ ನಿರ್ಮಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ರಾಯಚೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಬಸನಗೌಡ ದತ್ತ ಕಾಂಗ್ರೆಸ್ ಮುಖಂಡರಾದ ಕೆ ಶಾಂತಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಅಬ್ದುಲ್ ಗಪೂರ್ ಸಾಬ್, ಬಾಲ ಸ್ವಾಮಿ ಕೊಡ್ಲಿ ಸುಭಾಷ್ ನಾಯಕ್, ಹನುಮೇಶ್ ಮದ್ಲಾಪುರ್, ತಿಪ್ಪಣ್ಣ ಬಾಗಲವಾಡ್, ಶ್ರೀಶೈಲಪ್ಪಗೌಡ ರೌಡೂರು ಮಹಾಂತೇಶ್ ಸ್ವಾಮಿ, ಖಾಲೀದ್ ಗುರು ಸೇರಿದಂತೆ ಪುರಸಭೆಯ ಸದಸ್ಯರು, ವಿವಿಧ ಇಲಾಖೆಯ ಅಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.




