ನಿಪ್ಪಾಣಿ:ಪಟ್ಟಣಕುಡಿ ಗ್ರಾಮದಲ್ಲಿ ವಿಧಾನ ಪರಿಷತ್ ಸದcಸ್ಯರು ಹಾಗೂ ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿಗಳಾದ ಶ್ರೀ ಪ್ರಕಾಶ ಅಣ್ಣಾ ಹುಕ್ಕೇರಿ ಮತ್ತು ಶಾಸಕರಾದ ಶ್ರೀ ಗಣೇಶ ಅಣ್ಣಾ ಹುಕ್ಕೇರಿ ಅವರ ಪ್ರಯತ್ನದಿಂದ ಮಂಜೂರಾದ ರೊ.36 ಲಕ್ಷ ಅನುದಾನದಲ್ಲಿ ನಿರ್ಮಾಣವಾಗಲಿರುವ ಮಹಾಲಕ್ಷ್ಮಿ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ ದಾಸ್ತಾನು ಕಟ್ಟಡ ನಿರ್ಮಾಣ ಕಾಮಗಾರಿಗೆ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಶ್ರೀ ವಿನೋದ ಕಾಗೆ ಅವರು ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ನೂತನವಾಗಿ ಮಂಜೂರಾದ ನ್ಯಾಯಬೆಲೆ ಅಂಗಡಿ ಯನ್ನು ಉದ್ಘಾಟಿಸಿ, ಜನತೆಗೆ ಲಾಭವಾಗುವ ಹೊಸ ಸಹಾಯ ಸೇವೆಗಳನ್ನು ಪರಿಚಯಿಸಲಾಯಿತು.
ಕಾರ್ಯಕ್ರಮದಲ್ಲಿ ಸ್ಥಳೀಯ ಮುಖಂಡರು, ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ವರದಿ: ರಾಜು ಮುಂಡೆ