ಮಾನ್ವಿ: ವಿಧಾನಸಭಾ ಕ್ಷೇತ್ರದ ಧೋತ್ರಬಂಡಿಯಿಂದ ಬೆಳವಾಟ ಗ್ರಾಮಕ್ಕೆ ಸಂಪರ್ಕಿಸುವ ರಸ್ತೆ ಕಾಮಗಾರಿಯನ್ನು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ ನಾಲ್ಕು ಕೋಟಿ ರೂ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಚಿವರಾದ ಎನ್ ಎಸ್ ಬೋಸರಾಜು, ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಶರಣಪ್ರಕಾಶ್ ಪಾಟೀಲ್ ಹಾಗೂ ಮಾನ್ವಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹಂಪಯ್ಯ ನಾಯಕ ಅವರು ಭೂಮಿ ಪೂಜೆ ನೆರವೇರಿಸಿದರು.
ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ಧಿಗಾಗಿ ಹೆಚ್ಚಿನ ಅನುದಾನವನ್ನು ಮೀಸಲಿರಿಸಲಾಗಿದೆ. ಮುಂದಿನ ದಿನಗಳಲ್ಲಿ ಇನ್ನು ಉಳಿದ ಕೆಲ ರಸ್ತೆಗಳನ್ನ ಅಭಿವೃದ್ಧಿಗೊಳಿಸಲಾಗುವುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ರಾಯಚೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಕಾಂಗ್ರೆಸ್ ಮುಖಂಡರಾದ ದೊಡ್ಡಬಸಪ್ಪ ಗೌಡ, ಶ್ರೀಶೈಲಪ್ಪ ಗೌಡ ಪೋತ್ನಾಳ, ಎಸ್ ಎಂ ಪಾಟೀಲ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.




