ಧಾರವಾಡ : ಬೆಳಗಾವಿಯ ಸುವರ್ಣಸೌಧದ ಬಳಿ 2ಎ ಮೀಸಲಾತಿಗೆ ಆಗ್ರಹಿಸಿ ಇತ್ತೀಚೆಗೆ ಪ್ರತಿಭಟಿಸಿದ್ದ ಪಂಚಾಮಸಾಲಿ ಸಮುದಾಯದ ಹೋರಾಟಗಾರರ ಮೇಲೆ ನಡೆದ ಲಾಠಿ ಚಾರ್ಜ್ ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡದ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಕೆಯಾಗಿದೆ.
ಕೂಡಲಸಂಗಮ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ, ಪಂಚಮಸಾಲಿ ವಕೀಲರ ಪರಿಷತ್ ಸೇರಿದಂತೆ ನಾಲ್ವರು ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ್ದು, ಈ ಕುರಿತು ಗೃಹ ಹಾಗೂ ಪೊಲೀಸ್ ಇಲಾಖೆಗೆ ಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಹೋರಾಟದಲ್ಲಿ ಭಾಗಿಯಾಗಿದ್ದ 12 ಜನರ ವಿರುದ್ಧ FIR ದಾಖಲಾಗಿತ್ತು. ಸರ್ಕಾರ ಅದನ್ನು ರದ್ದು ಮಾಡುವಂತೆ ಆಗಹಿಸಿದ್ದೇವು.
ಲಾಠಿ ಚಾರ್ಜ್ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಸಮುದಾಯದ ಕ್ಷಮೆ ಕೋರಬೇಕು ಎಂದು ಒತ್ತಾಯಿಸಿದರೂ ಅವರು ಸ್ಪಂದಿಸಿಲ್ಲ. ಹೀಗಾಗಿ. ಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ್ದಾಗಿ ಸ್ವಾಮೀಜಿ ತಿಳಿಸಿದ್ದಾರೆ.