ಬೆಳಗಾವಿ: ಮಾಜಿ ಸಿಎಂ, ದಿ. ದೇವರಾಜ್ ಅರಸು ದಾಖಲೆ ಸಿಎಂ ಸಿದ್ಧರಾಮಯ್ಯ ಅವರು ಮುರಿದಿದ್ದಾರೆ. ಅವರು ಅತ್ಯಂತ ಶ್ರಮಪಟ್ಟು ಈ ಸ್ಥಾನಕ್ಕೆ ತಲುಪಿದ್ದು ಹೆಮ್ಮೆಯ ವಿಷಯ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿದರು.
ಹುಕ್ಕೇರಿಯಲ್ಲಿ ಮಾಧ್ಯಮಗಾರರೊಂದಿಗೆ ಮಾತನಾಡಿದ ಅವರು, 5 ವರ್ಷ ಸಿಎಂ ಅವಧಿಯಲ್ಲಿ ಅವರು ಮುಂದುವರೆಯುತ್ತಾರೆಂದು ಸ್ವತಃ ಅವರೇ ಹೇಳಿದ್ದಾರೆ. ಮುಂದಿನ ಬಜೆಟ್ ಕೂಡ ಅವರೇ ಮಂಡಿಸುತ್ತಾರೆ. ಇನ್ನು ಎಲ್ಲ ರಾಜಕೀಯ ಪಕ್ಷಗಳಲ್ಲಿ ಗೊಂದಲಗಳು ಇದ್ದೇ ಇರುತ್ತವೆ. ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಬಂದಿಲ್ಲಎಂದರು.




