ಬೆಳಗಾವಿ: ಬೆಳಗಾವಿ ನಗರವೂ ಸೇರಿದಂತೆ ಜಿಲ್ಲೆಯ ಕೆಲವು ತಾಲ್ಲೂಕಿನಲ್ಲಿ ಸೋಮವಾರ ಇಡೀ ದಿನ ಧಾರಾಕಾರ ಮಳೆ ಸುರಿಯಿತು.
ಮುಂಜಾಗೃತಾ ಕ್ರಮವಾಗಿ ಅಂಗನವಾಡಿ, ಶಾಲೆ ಹಾಗೂ ಕಾಲೇಜುಗಳಿಗೆ ತುರ್ತು ರಜೆ ಘೋಷಣೆ ಮಾಡಲಾಯಿತು. ಆ.19ರಂದು ಕೂಡ ರಜೆ ಮುಂದುವರಿಸಲಾಗಿದೆ.
ಬೆಳಗಾವಿ ನಗರ, ತಾಲ್ಲೂಕು, ಚನ್ನಮ್ಮನ ಕಿತ್ತೂರು, ಬೈಲಹೊಂಗಲ, ಸವದತ್ತಿ ಹಾಗೂ ಖಾನಾಪುರ ತಾಲ್ಲೂಕುಗಳಲ್ಲಿ ಸೋಮವಾರ ನಸುಕಿನ 3ರಿಂದಲೇ ಮಳೆ ಆರಂಭವಾಯಿತು.
ಈ ತಾಲ್ಲೂಕುಗಳ ಅಂಗನವಾಡಿ, ಶಾಲೆ ಹಾಗೂ ಕಾಲೇಜುಗಳಿಗೆ ಬೆಳಿಗ್ಗೆಯೇ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ರಜೆ ಘೋಷಣೆ ಮಾಡಿದರು.
ಅಷ್ಟೊತ್ತಿಗಾಗಲೇ ಶಾಲೆಗೆ ಬಂದಿದ್ದ ಮಕ್ಕಳು ಮರಳಿ ಮನೆಗೆ ಹೋದರು.ಮಳೆ ಮುಂದುವರಿದ ಕಾರಣ ಮಂಗಳವಾರ (ಆ.19) ಕೂಡ ರಜೆ ಮುಂದುವರಿಸಲಾಗಿದೆ.




