ರಾಯಚೂರು: ಧರ್ಮಸ್ಥಳ ಬುರುಡೆ ಪ್ರಕರಣದ ಬಗ್ಗೆ ದೂರು ಬಂದಿದ್ದರಿಂದಲೇ ಸರ್ಕಾರ ಎಸ್ ಐಟಿ ತನಿಖೆಗೆ ವಹಿಸಿತ್ತು. ತನಿಖೆ ಮುಗಿದ ಬಳಿಕ ವರದಿ ಸಲ್ಲಿಸಲಾಗುತ್ತೆ ಅದರ ಆಧಾರದ ಮೇಲೆ ಯಾರು ತಪ್ಪು ಮಾಡಿದ್ದಾರೋ ಅವರು ಕಾನೂನು ಕ್ರಮಕ್ಕೆ ಒಳಗಾಗುತ್ತಾರೆ ಎಂದು ಸಣ್ಣ ನೀರಾವರಿ ಸಚಿವ ಎನ್ ಎಸ್ ಬೋಸರಾಜು ಹೇಳಿದರು.
ಅವರಿಂದು ನಗರದಲ್ಲಿ ತಮ್ಮನ್ನು ಭೇಟಿಯಾದ ಮಾಧ್ಯಮ ಗಳೊಂದಿಗೆ ಮಾತನಾಡಿ, ಧರ್ಮಸ್ಥಳದಲ್ಲಿ ಶವಗಳ ಹೂಳಿದ ಆರೋಪದ ಮೇಲೆ ಪ್ರಕರಣ ದಾಖಲಾಗಿತ್ತು ಈ ನಿಟ್ಟಿನಲ್ಲಿ ಸರ್ಕಾರ ಎಸ್ ಐಟಿ ತನಿಖೆಗೆ ಆದೇಶಿಸಿ ಸತ್ಯಾಸತ್ಯತೆ ಪರಿಶೀಲಿಸಲು ಮುಂದಾಗಿತ್ತು. ಈಗ ತನಿಖೆ ಸ್ಥಗಿತವಾಗಿ ಸರ್ಕಾರಕ್ಕೆ ವರದಿ ನೀಡಲಾಗುತ್ತದೆ.
ಎಸ್ ಐಟಿ ತನಿಖೆಗೆ ವೀರೇಂದ್ರ ಹೆಗ್ಗಡೆ ಅವರೂ ಸ್ವಾಗತಿಸಿದ್ದರು.ಬಿಜೆಪಿ ನಾಯಕರು ವಿನಾಕಾರಣ ಎಲ್ಲದರಲ್ಲೂ ರಾಜಕಾರಣ ಮಾಡುತ್ತಾರೆ. ಜನರ ಮಧ್ಯೆ ಅಶಾಂತಿ ಸೃಷ್ಠಿಸುವುದೇ ಅವರ ಕೆಲಸ ಅಭಿವೃದ್ಧಿ ಕೆಲಸಗಳ ಬಗ್ಗೆ ಚರ್ಚೆ ಮಾಡಲ್ಲ,ಕೇಂದ್ರ ಸರ್ಕಾರ ರಾಜ್ಯಕ್ಕೆ ಅನುದಾನ ನೀಡುವ ಬಗ್ಗೆ,ಕೇಂದ್ರದ ಯೋಜನೆಗಳ ಬಗ್ಗೆ ಚರ್ಚಿಸುವ ಕಾಳಜಿಯಿಲ್ಲ. ಯಾರೇ ಕಾನೂನಿನಡಿ ತಪ್ಪು ಮಾಡಿದರೂ ಶಿಕ್ಷೆಗೆ ಗುರಿಯಾಗುತ್ತಾರೆ. ಸುಳ್ಳು ದೂರು ನೀಡಿ ಸರ್ಕಾರದ ದಿಕ್ಕು ತಪ್ಪಿಸಲಾಗಿದೆ ಎಂಬ ಪ್ರಶ್ನೆಗೆ ದೂರು ನೀಡಿದವರನ್ನು ಈಗಾಗಲೇ ಬಂಧಿಸಿ ವಿಚಾರಣೆಗೆ ಒಳಪಡಿಸಲಾಗುತ್ತಿದೆ ತಪ್ಪು ಮಾಡಿದರೆ ಶಿಕ್ಷೆಗೆ ಒಳಗಾಗುತ್ತಾರೆ ಎಂದು ಹೇಳಿದರು.
ವರದಿ: ಗಾರಲ ದಿನ್ನಿ ವೀರನ ಗೌಡ




