ಬೆಳಗಾವಿ: ಸಂಸದ ಧೈರ್ಯಶೀಲ ಮಾನೆ ಅವರು ಜಿಲ್ಲಾಧಿಕಾರಿ ವಿರುದ್ಧ ‘ಹಕ್ಕುಚ್ಯುತಿ’ ಆರೋಪ ಮಾಡಿ ಲೋಕಸಭೆ ಸ್ಪೀಕರ್ಗೆ ದೂರು ನೀಡಿದ್ದರ ಬಗ್ಗೆ ಕಾನೂನು ಹೋರಾಟ ಮಾಡುತ್ತೇವೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರ ವಿರುದ್ಧ ‘ಹಕ್ಕುಚ್ಯುತಿ’ ಮಾಡಿದ್ದಾರೆ ಎಂದು ದೂರು ನೀಡಿದ್ದಾರೆ ಅಷ್ಟೇ, ಆದರೆ ಇನ್ನುವರೆಗೆ ಯಾವುದೇ ನೋಟಿಸ್ ಬಂದಿಲ್ಲ. ಕಮಿಟಿ ರಚಿಸಿಲ್ಲ. ನೋಟಿಸ್ ಬಂದ ಮೇಲೆ ನಾವು ಕಾನೂನಾತ್ಮಕವಾಗಿ ಹೋರಾಟ ಮಾಡುತ್ತೇವೆ. ಈ ವಿಷಯದಲ್ಲಿ ರಾಜ್ಯದ ಎಲ್ಲಾ ಸಂಸದರು ಈ ಬಗ್ಗೆ ಧ್ವನಿ ಎತ್ತಬೇಕೆಂದು ತಿಳಿಸಿದರು.
ಪೊಲೀಸರು ರಾಜಕೀಯ ಒತ್ತಡಕ್ಕೆ ಮಣಿಯಬೇಡಿ: ಬೆಳಗಾವಿಯಲ್ಲಿ ನಡೆದ ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸದಿರುವುದಕ್ಕೆ ಸಂಬಂಧಿಸಿದಂತೆ ಮಾಧ್ಯಮವದರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಸಚಿವರು, ಪೋಕ್ಸೋ ಪ್ರಕರಣದಲ್ಲಿ ಪೊಲೀಸರು ಯಾವುದೇ ರಾಜಕೀಯ ಒತ್ತಡಕ್ಕೆ ಮಣಿಯಬಾರದು, ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪೋಕ್ಸೋ ಕೇಸ್ ದಾಖಲಿಸಲೇಬೇಕು. ಈ ಕುರಿತು ನಾನು ಪತ್ರಿಕೆಯಲ್ಲಿ ನೋಡಿದ್ದೇನೆ. ಈ ಕುರಿತು ಬೆಳಗಾವಿ ಪೊಲೀಸ್ ಆಯುಕ್ತರ ಬಳಿ ವಿವರಣೆ ಕೇಳಿ ಕ್ರಮಕ್ಕೆ ಸೂಚನೆ ನೀಡುತ್ತೇನೆಂದರು.




