ಬೆಂಗಳೂರು:- ಪೀಣ್ಯ ದಾಸರಹಳ್ಳಿ ನಾಡಿನಲ್ಲಿ ನೆಲೆಸಿರುವ ಪ್ರತಿಯೋಬ್ಬರು ಕನ್ನಡ ನಾಡು ನುಡಿ ಗೌರವಿಸ ಬೇಕೆಂದು ಕನ್ನಡ ಸಮೃದ್ಧಿಯಾಗಿ ಬೆಳೆಯಲಿ ಎಂದು ಮಾಜಿ ಪಾಲಿಕೆ ಸದಸ್ಯ ಹಾಗೂ ತೋಟಗಾರಿಕೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಎಚ್.ಎನ್ ಗಂಗಾಧರ್ ಹೇಳಿದರು.
ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಕರ್ನಾಟಕ ಏಕೀಕರಣಕ್ಕೆ ಹೋರಾಡಿದ ಮಹನೀಯರನ್ನು ನಾಡಿನ ಜನತೆ ಗೌರವಿಸ ಬೇಕೆಂದರು ಕಲಿಯೋಕೆ ಕೋಟಿ ಭಾಷೆಯಿದ್ದರು ಕೂಡಾ ಕನ್ನಡಾಭಿಮಾನವನ್ನು ಮರೆಯಬಾರದು ಎಂದು ಮಾಜಿ ಪಾಲಿಕೆ ಸದಸ್ಯ ಎಚ್ ಎನ್ ಗಂಗಾಧರ್ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ನಮ್ಮ ಕನ್ನಡ ನಾಡನ್ನು ಶ್ರೀಗಂಧದ ನಾಡು, ಕರುನಾಡು, ಕನ್ನಡಾಂಬೆ ಯ ನಾಡು, ತಾಯಿ ಭುವನೇಶ್ವರಿಯ ನಾಡು ಎಂಬೆಲ್ಲ ಹೆಸರುಗಳಿಂದ ಕರೆಯಲಾಗುತ್ತದೆ.
ಹಚ್ಚಹಸುರಿನ ಸುಂದರ ಬೆಟ್ಟ ಗುಡ್ಡಗಳ ನದಿಗಳು ಹರಿಯುವ ಸಾಧು -ಸಂತರು -ದಾಸರು ಶಿವಶರಣರು, ಕವಿಗಳಿಂದ ಕಂಗೊಳಿಸುತ್ತಿರುವ ಕನ್ನಡ ನಾಡು ಎಂದು ಬಿಜೆಪಿ ಪ್ರಭಾವಿ ಮುಖಂಡ ಹಾಗೂ ಶೇಂಗಾ ನಾಡು ಹಿತರಕ್ಷಣಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ತಿಮ್ಮರಾಜು ಗೌಡ್ರು ಹೇಳಿದರು.
ಅವರು ದೊಡ್ಡಣ್ಣ ಕೈಗಾರಿಕಾ ಪ್ರದೇಶ ವ್ಯಾಪ್ತಿಯ ಸ್ನೇಹಜೀವಿ ಕನ್ನಡ ಯುವಕರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಅಂಗವಾಗಿ ಭುವನೇಶ್ವರಿ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾತನಾಡಿದರು.
ಈ ಸಂದರ್ಭದಲ್ಲಿ ಎಸ್ ಎಲ್ ಎನ್ ಶಾಲೆ ಮುಖ್ಯಸ್ಥ ಗುರುದೇವ, ಶ್ರೀನಿವಾಸ್, ಪ್ರಕಾಶ್,ಶಿವಣ್ಣ, ಲಿಂಗರಾಜ, ಲೋಕೇಶ್, ರಮೇಶ್, ಇಮ್ರಾನ್,ಪಾಷಾ,ಮಾಜಿ ಪಾಲಿಕೆ ಸದಸ್ಯ ಎಚ್ ಎನ್ ಗಂಗಾಧರ್ ಅವರ ಸುಪುತ್ರ ಸ್ವರೂಪ ಶಾಲಾ ಮುಖ್ಯೋಪಾ ಧ್ಯಾಯರು ಶಿಕ್ಷಕ ಶಿಕ್ಷಕಿಯರು ಮುದ್ದು ಮಕ್ಕಳು ಸೇರಿದಂತೆ ಮುಂತಾದವರು ಇದ್ದರು.
ವರದಿ:- ಅಯ್ಯಣ್ಣ ಮಾಸ್ಟರ್