Ad imageAd image

ಪ್ರಜಾಪ್ರಭುತ್ವದಿನವನ್ನು ಎಲ್ಲರೂ ಸೇರಿ ಸಂಭ್ರಮಿಸೋಣ ಪ್ರತಿಯೊಬ್ಬರು ಕಡ್ಡಾಯವಾಗಿ ಪಾಲ್ಗೋಳ್ಳಿ :ಸಚಿವ ಸಂತೋಷ ಲಾಡ

Bharath Vaibhav
ಪ್ರಜಾಪ್ರಭುತ್ವದಿನವನ್ನು ಎಲ್ಲರೂ ಸೇರಿ ಸಂಭ್ರಮಿಸೋಣ ಪ್ರತಿಯೊಬ್ಬರು ಕಡ್ಡಾಯವಾಗಿ ಪಾಲ್ಗೋಳ್ಳಿ :ಸಚಿವ ಸಂತೋಷ ಲಾಡ
WhatsApp Group Join Now
Telegram Group Join Now

ಧಾರವಾಡ:  ಸೆಪ್ಟೆಂಬರ್ 06 ರಾಜ್ಯ ಸರಕಾರವು ಸೆಪ್ಟೆಂಬರ್ 15 ರ ಪ್ರಜಾಪ್ರಭುತ್ವದಿವನ್ನು ವಿಶೇಷವಾಗಿ ಆಚರಿಸಲು ನಿರ್ಧರಿಸಿದ್ದು, ಎಲ್ಲರೂ ಸೇರಿ ಸಂಭ್ರಮಿಸೋಣ. ಪ್ರತಿ ಇಲಾಖೆಗಳ ಅಧಿಕಾರಿ ಮತ್ತು ಸಿಬ್ಬಂದಿಗಳು ಕಡ್ಡಾಯವಾಗಿ ಪ್ರಜಾಪ್ರಭುತ್ವದಿನದ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಪಾಲ್ಗೋಳ್ಳಬೇಕೆಂದು ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅವರು ಹೇಳಿದರು.

ಅವರು ಇಂದು ಮಧ್ಯಾಹ್ನ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಜಿಲ್ಲಾ ಮಟ್ಟದ ಅಧಿಕಾರಿಗಳ ಮತ್ತು ವಿವಿಧ ಸರ್ಕಾರೇತರ ಸಂಘ, ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಪೂರ್ವಭಾವಿ ಸಭೆ ಜರುಗಿಸಿ, ಮಾತನಾಡಿದರು.

ರಾಜ್ಯದಲ್ಲಿ ಬೀದರದಿಂದ ಚಾಮರಾಜನಗರದವರೆಗೆ ಏಕಕಾಲಕ್ಕೆ ರಾಜ್ಯದ ಎಲ್ಲ 31 ಜಿಲ್ಲೆಗಳಲ್ಲಿ ಮಾನವ ಸರಪಳಿ ರೂಪಿಸುವ ಮೂಲಕ ಪ್ರಜಾಪ್ರಭುತ್ವದ ಏಕತೆ, ಸದೃಡತೆ, ಸಾಮರಸ್ಯ ಮತ್ತು ಜನಶಕ್ತಿ ಸಾರುವ ಸಂಕೇತವಾಗಿ ಮಾನವಸರಪಳಿ ರೂಪಿಸಲಾಗುತ್ತಿದೆ. ಜಿಲ್ಲೆಯ ಎಲ್ಲರೂ ಈ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಬೇಕೆಂದು ಸಚಿವ ಸಂತೋಷ ಲಾಡ ಸೂಚಿಸಿದರು.

ಜಿಲ್ಲೆಯ 51 ಕಿ.ಮೀ ಮಾರ್ಗದಲ್ಲಿ ಮಾನವಸರಪಳಿ ನಿರ್ಮಿಸಲಾಗುತ್ತಿದೆ. ಪ್ರತಿ ಕಿ.ಮೀಟರಗೆ ನೇಮಿಸುವ ನೊಡಲ್ ಅಧಿಕಾರಿ ಯೋಜಿತ ರೀತಿಯಲ್ಲಿ ಕಾರ್ಯ ನಿರ್ವಹಿಸಬೇಕು ಎಂದು ಅವರು ಹೇಳಿದರು. ಈ ಕಾರ್ಯಕ್ರಮ ಯಶಸ್ವಿಗೆ ಪ್ರತಿಯೊಬ್ಬರು ಶ್ರಮಿಸಿ, ಪಾಲ್ಗೊಳ್ಳಬೇಕು ಎಂದು ಸಚಿವರು ತಿಳಿಸಿದರು.

ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿರುವ ನಾವು ಅಂತರ ರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ವಿಶೇಷವಾಗಿ ಆಚರಿಸಲಾಗುತ್ತಿದೆ. ಸಮಾಜ ಕಲ್ಯಾಣ ಇಲಾಖೆ ಸಂಯೋಜಕತ್ವದಲ್ಲಿ ಈಗಾಗಲೇ ವಿವಿಧ ಇಲಾಖೆಗಳ ಅಧಿಕಾರಿಗಳು ಕಾರ್ಯ ನಿರತರಾಗಿದ್ದಾರೆ. ಈ ವಿಶಿಷ್ಟ ಕಾರ್ಯಕ್ರಮದಲ್ಲಿ ಜಿಲ್ಲೆಯ ವಿದ್ಯಾರ್ಥಿಗಳು, ಸಂಘ, ಸಂಸ್ಥೆಗಳ ಪ್ರತಿನಿಧಿಗಳು, ಸರಕಾರಿ ನೌಕರರು, ಕುಟುಂಬದವರು, ಸಾರ್ವಜನಿಕರು ಭಾಗವಹಿಸಬೇಕೆಂದು ಅವರು ಹೇಳಿದರು.

ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಅವರು ಸ್ವಾಗತಿಸಿದರು. ಹುಬ್ಬಳ್ಳಿ ಧಾರವಾಡ ಮಹಾನಗರ ಪೆÇಲೀಸ್ ಆಯುಕ್ತ ಎನ್.ಶಶಿಕುಮಾರ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ವರೂಪ ಟಿ.ಕೆ., ಜಿಲ್ಲಾ ಹೆಚ್ಚುವರಿ ಪೆÇಲೀಸ್ ಅಧೀಕ್ಷಕ ನಾರಾಯಣ ಬರಮನಿ, ಮಹಾನಗರ ಪಾಲಿಕೆ ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ ವೇದಿಕೆಯಲ್ಲಿದ್ದರು.

ಸಭೆಯಲ್ಲಿ ಉಪವಿಭಾಗಾಧಿಕಾರಿ ಶಾಲಂ ಹುಸೇನ್, ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಬಿ.ಎಸ್.ಮುಗನೂರಮಠ, ಕವಿವಿ ಕುಲಸಚಿವ ಎ.ಚನ್ನಪ್ಪ, ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು, ಮುಖಂಡರಾದ ಲಕ್ಷ್ಮಣ ಬಕ್ಕಾಯಿ, ಮಹೇಂದ್ರ ಸಿಂಘಿ, ಅಶೋಕ ದೊಡಮನಿ ಸೇರಿದಂತೆ ಅನೇಕರು ಭಾಗವಹಿಸಿ, ತಮ್ಮ ಅಭಿಪ್ರಾಯಗಳನ್ನು ತಿಳಿಸಿದರು.

ವರದಿ: ವಿನಾಯಕ ಗುಡ್ಡದಕೇರಿ

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!