ಬೆಂಗಳೂರು: ರಾಜ್ಯದ ದಕ್ಷಿಣ ಕರ್ನಾಟಕ ಭಾಗದ ಜಿಲ್ಲೆಗಳನ್ನು ಒಟ್ಟಾಗಿ ಸೇರಿಸುವ ಮೂಲಕ ಪ್ರತ್ಯೇಕ ಮೈಸೂರು ರಾಜ್ಯವನ್ನು ರಚನೆ ಮಾಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಮೈಸೂರು ರಾಜ್ಯ ರಚನಾ ಒತ್ತಾಯ ಸಮಿತಿ ಆಗ್ರಹಿಸಿದೆ.
ರಾಜ್ಯದಲ್ಲಿ ಜನಸಂಖ್ಯೆ ಹೆಚ್ಚಾಗಿದ್ದು, ತಲಾ 3.5 ಕೋಟಿಗೆ ವಿಭಜನೆ ಆಗುವಂತೆ ರಾಜ್ಯ ರಚಿಸುವುದು ಸೂಕ್ತ ಎಂದು ಆಗ್ರಹಿಸಲಾಗಿದೆ.
ಕರ್ನಾಟಕದಲ್ಲಿ ಮುಂಬರುವ ವಿಧಾನಸಭೆ ಚುನಾವಣೆ ಮತ್ತು ಲೋಕಸಭೆ ಚುನಾವಣೆಗೂ ಮುನ್ನ ಅಂದ್ರೆ 2028ರೊಳಗೆ ಈ ಬಗ್ಗೆ ನಿರ್ಧಾರ ಕೈಗೊಳ್ಳಬೇಕು ಮತ್ತು ಇದರ ಅನ್ವಯ ವಿಧಾನಸಭಾ ಕ್ಷೇತ್ರಗಳ ಮರುವಿಂಗಡಣೆ ಮಾಡಬೇಕಿದೆ.
ಹೀಗೆ ಪ್ರತ್ಯೇಕ ರಾಜ್ಯ ರಚನೆಯಿಂದ ರಾಜ್ಯದ ಅಭಿವೃದ್ಧಿಗೆ ಪೂರಕವಾಗಲಿದೆ ಎಂದು ಸಮಿತಿಯ ರಾಜ್ಯಾಧ್ಯಕ್ಷ ಮರಿಮಲ್ಲಯ್ಯ ಹೇಳಿದ್ದಾರೆ ಆಗ್ರಹಿಸಿದ್ದಾರೆ.
ನಮ್ಮ ರಾಜ್ಯ ಕರ್ನಾಟಕ ಅತಿದೊಡ್ಡ ರಾಜ್ಯವಾಗಿದೆ. ಹೀಗಾಗಿ ಎಲ್ಲಾ ಭಾಗಗಳ ಸರ್ವಾಂಗೀಣ ಅಭಿವೃದ್ಧಿ ಮತ್ತು ನಾಡಿನ ಸಮತೋಲನ ಆಡಳಿತ ದೃಷ್ಟಿಯಿಂದ ಪ್ರತ್ಯೇಕ ರಾಜ್ಯಗಳನ್ನು ರಚಿಸುವುದು ಸೂಕ್ತ ಎಂಬ ಅಭಿಪ್ರಾಯವನ್ನು ಸಮಿತಿ ವ್ಯಕ್ತಪಡಿಸಿದೆ.
ಈ ಪ್ರಕಾರವಾಗಿ ಮೈಸೂರು, ಮಂಡ್ಯ, ಕೊಡಗು, ಉಡುಪಿ, ದಕ್ಷಿಣ ಕನ್ನಡ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಹಾಸನ, ಚಿತ್ರದುರ್ಗ, ಚಿಕ್ಕಮಗಳೂರು, ಶಿವಮೊಗ್ಗ, ಕೋಲಾರ, ಚಿಕ್ಕಬಳ್ಳಾಪುರ, ದಾವಣಗೆರೆ ಮತ್ತು ಉತ್ತರ ಕನ್ನಡವನ್ನು ಒಳಗೊಂಡು ಮೈಸೂರು ರಾಜ್ಯ ರಚಿಸಬೇಕಿದೆ ಎಂದು ಆಗ್ರಹಿಸಿದ್ದಾರೆ.




