Ad imageAd image

ಯು ಟ್ಯೂಬ್ ಚಾನಲ್ ಗಳ ಹಾವಳಿ ತಡೆಯಲು ಲೈಸೆನ್ಸ್ : ಸಿದ್ದರಾಮಯ್ಯ 

Bharath Vaibhav
ಯು ಟ್ಯೂಬ್ ಚಾನಲ್ ಗಳ ಹಾವಳಿ ತಡೆಯಲು ಲೈಸೆನ್ಸ್ : ಸಿದ್ದರಾಮಯ್ಯ 
WhatsApp Group Join Now
Telegram Group Join Now

ಬೆಂಗಳೂರು : ಬ್ಲಾಕ್ ಮೇಲ್ ಮತ್ತು ಕೀಳು ಮಟ್ಟದ ಪ್ರಾಕ್ಟೀಸ್ ಮಾಡುತ್ತಿರುವ ಯು ಟ್ಯೂಬ್ ಚಾನಲ್ ಗಳು ಸಮಾಜಕ್ಕೆ ಶಾಪ ಆಗಿದ್ದು, ಇಂಥವರಿಂದ ಪತ್ರಿಕೋದ್ಯಮದ ಘನತೆ ಹಾಳಾಗುತ್ತಿದೆ, ಹೀಗಾಗಿ ಯು ಟ್ಯೂಬ್ ಚಾನಲ್ ಗಳ ಹಾವಳಿ ತಡೆಯಲು ಇವರಿಗೂ ಲೈಸೆನ್ಸ್ ಕಡ್ಡಾಯಗೊಳಿಸಬೇಕು ಎಂದು ಸಂಘವು ಬೇಡಿಕೆ ಸಲ್ಲಿಸಿದೆ.ಈ ಬೇಡಿಕೆ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್ ಅನ್ನು ಉದ್ಘಾಟಿಸಿ, ಲೋಗೋ ಬಿಡುಗಡೆ ಮಾಡಿ, ಮಾತನಾಡಿದರು.

ನಾನು ರಾಜಕಾರಣಕ್ಕೆ ಬಂದು ಇಷ್ಟು ವರ್ಷದಲ್ಲಿ ಯಾವ ಮಾಧ್ಯಮಗಳಿಗೂ ನನ್ನ ಬಗ್ಗೆ ಹೀಗೇ ಬರೆಯಿರಿ, ಹಾಗೇ ಬರೆಯಿರಿ ಎಂದು ಯಾವತ್ತೂ ಹೇಳಿಲ್ಲ. ನನ್ನ ಬಗ್ಗೆ ಸುಳ್ಳುಗಳನ್ನು ಸತತವಾಗಿ ತೋರಿಸುವಾಗಲೂ ಯಾಕೆ ಹೀಗೆ ತೋರಿಸ್ತೀರಿ? ಅಂತಲೂ ಯಾರಿಗೂ ಕೇಳಿಲ್ಲ. ನಿಮ್ಮಿಂದ ನನಗೆ ಏನೇನೂ ಅಪೇಕ್ಷೆ ಇಲ್ಲ. ಸಾಧ್ಯವಾದರೆ ಸತ್ಯ ತೋರಿಸಿ, ಸತ್ಯ ಬರೆಯಿರಿ.

ನನ್ನ ಕಾರಿನ ಮೇಲೆ ಕಾಗೆ ಕುಳಿತದ್ದೇ ದೊಡ್ಡ ವಿಷಯದಂತೆ ಮಾಧ್ಯಮಗಳಲ್ಲಿ ಚರ್ಚೆ ನಡೆಯಿತು. ಆ ಚರ್ಚೆಯಲ್ಲಿ ಜ್ಯೋತಿಷಿಗಳು, ಚಾನಲ್ ಗಳು ತೋರಿಸಿದ್ದೆಲ್ಲಾ ಅಪ್ಪಟ ಸುಳ್ಳಾಯ್ತು. ಮಾಧ್ಯಮದಲ್ಲಿ ಹೀಗೆಲ್ಲಾ ತೋರಿಸಿದರೆ ಜನ ಒಪ್ಪುತ್ತಾರಾ ಎಂದು ಯೋಚನೆ ಮಾಡಬೇಕು.

ಅಭಿವ್ಯಕ್ತಿ ಸ್ವಾತಂತ್ರ್ಯ ಎತ್ತಿಹಿಡಿಯಲು ನಮ್ಮ ಸರ್ಕಾರ ಸದಾ ಸಿದ್ಧ. ಯಾವತ್ತೂ ಇದಕ್ಕೆ ಧಕ್ಕೆ ತರುವ ಕೆಲಸವನ್ನು ನಾನೂ ಮಾಡಿಲ್ಲ, ನಮ್ಮ ಸರ್ಕಾರವೂ ಮಾಡುವುದಿಲ್ಲ.ಬ್ಲಾಕ್ ಮೇಲ್ ಮತ್ತು ಕೀಳು ಮಟ್ಟದ ಪ್ರಾಕ್ಟೀಸ್ ಮಾಡುತ್ತಿರುವ ಯು ಟ್ಯೂಬ್ ಚಾನಲ್ ಗಳು ಸಮಾಜಕ್ಕೆ ಶಾಪ ಆಗಿದ್ದು, ಇಂಥವರಿಂದ ಪತ್ರಿಕೋದ್ಯಮದ ಘನತೆ ಹಾಳಾಗುತ್ತಿದೆ, ಹೀಗಾಗಿ ಯು ಟ್ಯೂಬ್ ಚಾನಲ್ ಗಳ ಹಾವಳಿ ತಡೆಯಲು ಇವರಿಗೂ ಲೈಸೆನ್ಸ್ ಕಡ್ಡಾಯಗೊಳಿಸಬೇಕು ಎಂದು ಸಂಘವು ಬೇಡಿಕೆ ಸಲ್ಲಿಸಿದೆ. ಈ ಬೇಡಿಕೆ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

 

 

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!