ಬೆಂಗಳೂರು : ಕಲಬೆರಕೆಯ ಔಷಧ ಅಥವಾ ಸೌಂದರ್ಯವರ್ಧಕವನ್ನು ಮಾರಾಟ ಮಾಡುವವರಿಗೆ ಜೀವಾವಧಿ ಶಿಕ್ಷೆ ವಿಧಿಸಲು ಅವಕಾಶ ಕಲ್ಪಿಸುವ ‘ಔಷಧಗಳು ಮತ್ತು ಸೌಂದರ್ಯವರ್ಧಕ-ಗಳು (ಕರ್ನಾಟಕ ತಿದ್ದುಪಡಿ) ವಿಧೇಯಕವನ್ನು ರಾಜ್ಯ ಸರ್ಕಾರ ಮಂಡಿಸಿದೆ.
ರಾಜ್ಯದಲ್ಲಿ ಮರುಕಳಿಸದಂತೆ ತಡೆಯುವ ಉದ್ದೇಶದಿಂದ ರಾಜ್ಯ ಸರ್ಕಾರ ಮತ್ತಷ್ಟು ಕಠಿಣ ನಿಯಮಗಳನ್ನು ಅಳವಡಿಸಿ ಔಷಧ ಮತ್ತು ಪ್ರಸಾಧನ ಸಾಮಗ್ರಿ (ಕರ್ನಾಟಕ ತಿದ್ದುಪಡಿ) ವಿಧೇಯಕವನ್ನು ರಾಜ್ಯ ಸರ್ಕಾರ ಮಂಡಿಸಿದೆ.
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪರವಾಗಿ ಕಾನೂನು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಅವರು ವಿಧೇಯಕ ಮಂಡಿಸಿದರು. ಯಾವುದೇ ಔಷಧ ಅಥವಾ ಪ್ರಸಾಧನ ಸಾಮಗ್ರಿಗಳನ್ನು ಕಲಬೆರಕೆ ಮಾಡಿದವರ ಅಪರಾಧ ದೃಢಪಟ್ಟರೆ ಅವರಿಗೆ ನೀಡಲಾಗುವ 10 ವರ್ಷ ಕಾರಾಗೃಹ ಶಿಕ್ಷೆಯನ್ನು ಜೀವಾವಧಿ ಶಿಕ್ಷೆಗೆ ವಿಸ್ತರಿಸಲು ವಿಧೇಯಕದಲ್ಲಿ ಅವಕಾಶ ನೀಡಲಾಗಿದೆ.
ರಾಜ್ಯದಲ್ಲಿ ಔಷಧಗಳು ಮತ್ತು ಪ್ರಸಾಧನ ಸಾಮಗ್ರಿಗಳ ಖರೀದಿ, ಗುಣಮಟ್ಟ ಪರೀಕ್ಷೆ ಮಾಡುವ ಜವಾಬ್ದಾರಿಯನ್ನು ಕೇಂದ್ರ ಔಷಧಗಳ ಪ್ರಯೋಗಾಲಯ ಮತ್ತು ನಿರ್ದೇಶಕರ ಬದಲಿಗೆ ರಾಜ್ಯ ಸರ್ಕಾರನಿಗದಿ ಮಾಡಿದ ಪ್ರಾಧಿಕಾರಕ್ಕೆ ನೀಡಲು ರಾಜ್ಯ ಸರ್ಕಾರಕ್ಕೆ ಅಧಿಕಾರ ನೀಡಲಾಗುತ್ತಿದೆ.




