ಬೆಂಗಳೂರು:- ಜೀವಂತ ಸುಟ್ಟು ಹಾಕುವುದಾಗಿ ವಿಧಾನಪರಿಷತ್ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿಗೆ ಸಾಮಾಜಿಕ ಜಾಲತಾಣದ ಮೂಲಕ ಬಹಿರಂಗ ಬೆದರಿಕೆ ಹಾಕಲಾಗಿದೆ.
ಈ ಸಂಬಂಧ ಮಾಜಿ ಶಾಸಕ ವೈ.ಸಂಪಂಗಿ ಮತ್ತು ರಾಜ್ಯ ಬಿಜೆಪಿ ಕಾನೂನು ವಿಭಾಗದ ಸಂಚಾಲಕ ವಸಂತಕುಮಾರ್ ನೇತೃತ್ವದಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಲಾಗಿದೆ.
ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಬಿಜೆಪಿ ಕಾನೂನು ವಿಭಾಗದ ಸಂಚಾಲಕ ವಸಂತಕುಮಾರ್, ತಮ್ಮ ವಿರುದ್ಧ ಮಾತನಾಡದಂತೆ ಸರ್ಕಾರ ಕೆಟ್ಟದಾಗಿ ನಡೆದುಕೊಳ್ಳುತ್ತಿದೆ.
ಜೀವಂತ ಸುಟ್ಟು ಹಾಕುವುದಾಗಿ ಸೋಷಿಯಲ್ ಮೀಡಿಯಾ ಪೋಸ್ಟ್ ಮಾಡಲಾಗಿದೆ. ಅಲ್ಲದೇ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿ ಆವರಣದಲ್ಲೇ ಸರ್ಕಾರಿ ಕಚೇರಿ, ಸರ್ಕಾರಿ ವಾಹನಗಳಿಗೆ ಬೆಂಕಿ ಹಚ್ಚುವ ಹೇಳಿಕೆ ಹಿನ್ನೆಲೆ ದೂರು ನೀಡಲಾಗಿದೆ ಎಂದರು.
ಛಲವಾದಿ ನಾರಾಯಣಸ್ವಾಮಿ ಅವರ ಹೇಳಿಕೆ ಸ್ಪಷ್ಟವಾಗಿದೆ. ಅವರು ಯಾವುದೇ ಜಾತಿ ನಿಂದನೆ ಮಾಡಿಲ್ಲ. ವಿಪಕ್ಷ ನಾಯಕರ ಮೇಲೆ ಅನುಮತಿ ಪಡೆಯದೇ ಎಫ್‌ಐಆರ್ ಮಾಡಲಾಗಿದೆ. ಸಭಾಪತಿ, ರಾಜ್ಯಪಾಲರ ಅನುಮತಿ ಪಡೆಯದೇ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಕಿಡಿಾರಿದ್ದಾರೆ.




