Ad imageAd image

ತಲೆಮೇಲೆ ವಿದ್ಯುತ್ ಕಂಬ ಮುರಿದು ಬಿದ್ದು ಲೈನ್ ಮ್ಯಾನ್ ಸಾವು

Bharath Vaibhav
ತಲೆಮೇಲೆ ವಿದ್ಯುತ್ ಕಂಬ ಮುರಿದು ಬಿದ್ದು ಲೈನ್ ಮ್ಯಾನ್ ಸಾವು
WhatsApp Group Join Now
Telegram Group Join Now

ಮಂಡ್ಯ : ಮಂಡ್ಯದಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ತಲೆಮೇಲೆ ವಿದ್ಯುತ್ ಕಂಬ ಮುರಿದು ಬಿದ್ದು ಲೈನ್ ಮ್ಯಾನ್ ಮೃತಪಟ್ಟ ಘಟನೆ ನಡೆದಿದೆ.

ಮೃತರನ್ನು ಕುಲುಮೆದೊಡ್ಡಿ ಗ್ರಾಮದ ಕುಮಾರ್ (31) ಎಂದು ಗುರುತಿಸಲಾಗಿದೆ. ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಹಲಸಹಳ್ಳಿಯಲ್ಲಿ ಈ ಘಟನೆ ನಡೆದಿದೆ.

ವಿದ್ಯುತ್ ಲೈನ್ ಕೆಲಸ ಮಾಡುವ ವೇಳೆ ಕಂಬ ಅಳವಡಿಸುವಾಗ ವಿದ್ಯುತ್ ಕಂಬ ಮುರಿದು ಕಂಬ ಲೈನ್ ಮ್ಯಾನ್ ತಲೆ ಮೇಲೆ ಬಿದ್ದಿದೆ.

ಗಂಭೀರವಾಗಿ ಗಾಯಗೊಂಡ ಕುಮಾರ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಲಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!