ಬೆಂಗಳೂರು : ಯಶವಂತಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಲಿಂಗಧೀರನಹಳ್ಳಿ ವಾರ್ಡಿನ ಅಂದ್ರಹಳ್ಳಿ ಕೆರೆ ಅಭಿವೃದ್ಧಿ ಮತ್ತು ದೊಡ್ಡ ಬಿದರಿಕಲ್ಲ್ ವಾರ್ಡಿನ ವ್ಯಾಪ್ತಿಗೆ ಬರುವ ಇಂದಿರಾನಗರ,ಮಾತೃ ಶ್ರೀನಗರ , ಸುವರ್ಣ ನಗರ, ವೇಣುಗೋಪಾಲ್ ನಗರ, ಮತ್ತು ಶಿವಗಂಗಾ ಬಡಾವಣೆಯಲ್ಲಿ ವಿವಿಧ ರಸ್ತೆಗಳ ಡಾಂಬರೀಕರಣ, ಕೆರೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ಮತ್ತು ಬೋರವೆಲ್ ಉದ್ಘಾಟನೆ ಮಾಜಿ ಸಚಿವ ಹಾಗೂ ಯಶವಂತಪುರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್ ಟಿ ಸೋಮಶೇಖರ್ ಗುದ್ದಲಿ ಪೂಜೆ ಮಾಡಿ ಚಾಲನೆ ನೀಡಿದರು.

ನಂತರ ಅವರು ಮಾತನಾಡಿ ಕ್ಷೇತ್ರದಲ್ಲಿ ಹಲವಾರು ಕಾಮಗಾರಿಗಳು ಭರದಿಂದ ಸಾಗುತ್ತಿವೆ ಅದರಲ್ಲಿ ಕೆಲವು ಕಾಮಗಾರಿಗಳು ಮುಗಿಯುವ ಹಂತದಲ್ಲಿವೆ ಎಂದು ಶಾಸಕ ಎಸ್ ಟಿ ಸೋಮಶೇಖರ್ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಪದಾಧಿಕಾರಿಗಳು ವಾರ್ಡ ಅಧ್ಯಕ್ಷರು ಪದಾಧಿಕಾರಿಗಳು ಮತ್ತು ಎಲ್ಲಾ ಬಡಾವಣೆಗಳ ಕಾಂಗ್ರೆಸ್ ಮುಖಂಡರು ಮಹಿಳೆಯರು ಕಾರ್ಯಕರ್ತರು ಹಾಗೂ ಇಂಜಿನಿಯರ್ ಗಳು, ಸಿಬ್ಬಂದಿ ವರ್ಗದವರು ಗುತ್ತಿಗೆದಾರರು, ವಾರ್ಡಗಳ ಮತ್ತು ಬಡಾವಣೆಗಳ ಸಮಸ್ತ ನಾಗರಿಕರು ಮಹಿಳೆಯರು ಮುಂತಾದವರು ಇದ್ದರು.
ವರದಿ : ಅಯ್ಯಣ್ಣ ಮಾಸ್ಟರ್




