ಬೆಂಗಳೂರು : ರಾಜ್ಯಾದ್ಯಂತ ಇಂದು ಸಂಜೆ 4 ಗಂಟೆಯಿಂದ 6 ದಿನಗಳ ಕಾಲ ಮದ್ಯ ಮಾರಾಟ ನಿಷೇಧಿಸಲಾಗಿದೆ. ವಿಧಾನ ಪರಿಷತ್ ಚುನಾವಣೆ, ಲೋಕಸಭಾ ಚುನಾವಣಾ ಮತಎಣಿಕೆ ಹಿನ್ನೆಲೆಯಲ್ಲಿ ಮದ್ಯ ಮಾರಾಟಕ್ಕೆ ನಿರ್ಬಂಧ ವಿಧಿಸಲಾಗಿದೆ.
ಜೂನ್ 1ರಿಂದ ಜೂನ್ 6ವರೆಗೆ ಮದ್ಯ ಮಾರಾಟ ಬಂದ್ ಆಗಲಿದೆ.ಜೂನ್ 2 ಹಾಗೂ ಜೂನ್ 4 ಹಾಗೂ ಜೂನ್ 6ರಂದು ಮದ್ಯ ಮಾರಾಟ ಸಂಪೂರ್ಣ ಬಂದ್ ಆಗಲಿದೆ. ಜೂ 1 ಹಾಗೂ ಜೂನ್ 3ರದು ಮಧ್ಯ ಮಾರಾಟ ಭಾಗಶಃ ಬಂದ್ ಆಗಲಿದೆ.
ರಾಜ್ಯದಲ್ಲಿ ಲೋಕಸಭಾ ಚುನಾವಣೆಗೆ ಏಪ್ರಿಲ್ 24 ರಿಂದ 26ವರೆಗೆ ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿತ್ತು. ಈಗ ಮತ್ತೆ ಮಧ್ಯ ಮಾರಾಟಕ್ಕೆ ನಿರ್ಬಂಧ ವಿಧಿಸಲಾಗಿದ್ದು, ಮದ್ಯ ಮಾರಾಟಗಾರರಿಗೆ ದೊಡ್ಡ ಹೊಡೆತ ಬೀಳಲಿದೆ.