ಬೆಂಗಳೂರು: ರಾಜ್ಯದಲ್ಲಿ ಅಂಗನವಾಡಿ ಕೊಠಡಿಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳನ್ನ ಆರಂಭಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಅಂಗನವಾಡಿಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭ ಮಾಡಲು 2 ಕೊಠಡಿಗಳ ಅಗತ್ಯವಿದೆ. ರಾಜ್ಯದಲ್ಲಿ ಈ ರೀತಿ 2 ಕೊಠಡಿಗಳಿರುವ 10 ಸಾವಿರ ಅಂಗನವಾಡಿ ಕೇಂದ್ರಗಳನ್ನು ಗುರುತಿಸಿ ಪಟ್ಟಿ ಮಾಡಲಾಗಿದೆ.
ಸದ್ಯ 4 – 5 ಸಾವಿರ ಅಂಗನವಾಡಿಗಳಲ್ಲಿ ತರಗತಿಗಳನ್ನು ಆರಂಭಿಸಲಾಗುವುದು. ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಎಲ್ಲ ಕೇಂದ್ರಗಳಲ್ಲಿ ಆರಂಭ ಮಾಡಲಾಗುವುದು ಎಂದು ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.




