Ad imageAd image

ಅಸ್ಟ್ರೊನೊಮಿ ಕ್ಯಾಂಪ್‌ಗೆ ಹುಬ್ಬಳ್ಳಿಯ ವಿದ್ಯಾರ್ಥಿನಿ ಕೃಷಿ ಮೆಣಸಿನಕಾಯಿ ಆಯ್ಕೆ

Bharath Vaibhav
ಅಸ್ಟ್ರೊನೊಮಿ ಕ್ಯಾಂಪ್‌ಗೆ ಹುಬ್ಬಳ್ಳಿಯ ವಿದ್ಯಾರ್ಥಿನಿ ಕೃಷಿ ಮೆಣಸಿನಕಾಯಿ ಆಯ್ಕೆ
WhatsApp Group Join Now
Telegram Group Join Now

ಹುಬ್ಬಳ್ಳಿಇಲ್ಲಿನ ಕೇಂದ್ರೀಯ ವಿದ್ಯಾಲಯ ನಂ.1ರ ಹತ್ತನೆಯ ತರಗತಿ ವಿದ್ಯಾರ್ಥಿನಿ ಕೃಷಿ ಸಂಗಮೇಶ ಮೆಣಸಿನಕಾಯಿ ಮಾ.11 ರಿಂದ 14ರವರೆಗೆ ಥಾಯ್ಲೆಂಡ್​​​​​ನ ಚಿಯಾಂಗ್ ಮಾಯ್ ಪ್ರಾಂತ್ಯದಲ್ಲಿ ನಡೆಯಲಿರುವ ಆಗ್ನೇಯ ಏಷ್ಯಾ ರಾಷ್ಟ್ರಗಳ ಸಂಘ ಅಸ್ಟ್ರೊನೊಮಿ ಕ್ಯಾಂಪ್‌ಗೆ (ASEAN Astronomy Camp) ಆಯ್ಕೆಯಾಗಿದ್ದಾರೆ.

ನ್ಯಾಷನಲ್ ಅಸ್ಟ್ರೊನೊಮಿ ರೀಸರ್ಚ್ ಇನ್‌ಸ್ಟಿಟ್ಯೂಟ್ ಆಫ್ ಥಾಯ್ಲೆಂಡ್​​ (NARIT ನರಿಟ್) ಹಾಗೂ ಯುನೆಸ್ಕೋದ ಅಂತಾರಾಷ್ಟ್ರೀಯ ಖಗೋಳ ತರಬೇತಿ ಕೇಂದ್ರಗಳು (International Training Center in Astronomy under UNESCO – ITCA) ಜಂಟಿಯಾಗಿ ಈ ಶಿಬಿರವನ್ನು ನಡೆಸುತ್ತಿವೆ. ಈ ಶಿಬಿರವು 15 ರಿಂದ 19 ವರ್ಷದೊಳಗಿನ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗುತ್ತಿದ್ದು, ಇದಕ್ಕೆ ವಿಶ್ವದ ನಾನಾ ದೇಶಗಳ 316 ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದರು. ಅವರಲ್ಲಿ ಕೇವಲ 30 ವಿದ್ಯಾರ್ಥಿಗಳನ್ನು, ಅವರು ಬರೆದಿರುವ ಖಗೋಳಶಾಸ್ತ್ರದ ನಿಬಂಧದ ಆಧಾರ ಮೇಲೆ ಶಿಬಿರಕ್ಕೆ ಆಯ್ಕೆ ಮಾಡಲಾಗಿದೆ ಎಂದು ಎಎಸಿ ಪ್ರಕಟಣೆಯಲ್ಲಿ ತಿಳಿಸಿದೆ. ಭಾರತದಿಂದ ಇಬ್ಬರು ವಿದ್ಯಾರ್ಥಿನಿಯರು ಆಯ್ಕೆಯಾಗಿದ್ದು, ಅದರಲ್ಲಿ ಕೃಷಿ ಒಬ್ಬಳಾಗಿದ್ದಾರೆ.

ಖಗೋಳಶಾಸ್ತ್ರದ ಮೇಲಿನ ಆಸಕ್ತಿಗೆ ಇಸ್ರೋ ವಿಜ್ಞಾನಿಗಳ ಪ್ರೇರಣೆ: ಈ ಆಯ್ಕೆಗೆ ಕೇಂದ್ರೀಯ ವಿದ್ಯಾಲಯ ನಂ.1ರ ಶಿಕ್ಷಕರು ಏಪ್ರಿಲ್ 2024ರಲ್ಲಿ PM SHRI (PM Schools for Rising India) ಅನುದಾನದಲ್ಲಿ ಬೆಂಗಳೂರಿನ ಭಾರತೀಯ ಅಂತರಿಕ್ಷ ಸಂಶೋಧನಾ ಸಂಸ್ಥೆಗೆ (ISRO) ವಿಜ್ಞಾನ ಪ್ರವಾಸ ಕರೆದೊಯ್ದಿದ್ದರು. ಆ ಸಂದರ್ಭದಲ್ಲಿ ಇಸ್ರೋದ ವಿವಿಧ ವಿಭಾಗಗಳಿಗೆ ಭೇಟಿ ನೀಡಿದ್ದೆವು. ಅದೇ ವೇಳೆ, ವಿಜ್ಞಾನಿಗಳಾದ ಪಿ. ವೀರಮುತುವೆಲ್, ನಿಗಾರ್ ಶಾಜಿ, ಪ್ರಶಾಂತ ಬಾಗಲಕೋಟೆ ಹಾಗೂ ಇತರರ ಜೊತೆ ಸಣ್ಣ ಸಂವಾದ ನಡೆಸಿದ್ದೆ. ಅವರ ಮಾತುಗಳಿಂದ ಅಂತರಿಕ್ಷ ಮತ್ತು ಖಗೋಳಶಾಸ್ತ್ರದಲ್ಲಿ ಹೆಚ್ಚಿನ ಆಸಕ್ತಿ ಉಂಟಾಯಿತು, ಈ ಶಿಬಿರದ ಆಯ್ಕೆ ನನ್ನ ಶಾಲೆ, ಪಿಎಂ ಶ್ರೀ ಅನುದಾನ, ಇಸ್ರೋ ಹಾಗೂ ಅಲ್ಲಿನ ವಿಜ್ಞಾನಿಗಳ ಪ್ರೇರಣೆಯೇ ಕಾರಣ ಎಂದು ಅಂತಾರಾಷ್ಟ್ರೀಯ ಖಗೋಳಶಾಸ್ತ್ರ ಶಿಬಿರಕ್ಕೆ ಆಯ್ಕೆಯಾದ ಕೃಷಿ ತಿಳಿಸಿದರು.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!