ಸೇಡಂ:- ಪಟ್ಟಣದ ತಾಲೂಕ ಪಂಚಾಯತ್ ಕಚೇರಿಯಲ್ಲಿ ಸ್ಥಳೀಯ ಶಾಸಕರು ಹಾಗು ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಶರಣಪ್ರಕಾಶ್ ಪಾಟೀಲ್ ಅವರು ಟಾಸ್ಕ್ ಫೋರ್ಸ್ ಸಭೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಮಳೆ ಹಾನಿಗೊಳಗಾದ ಗ್ರಾಮಗಳ ಬಗ್ಗೆ ಪಿಡಿಓ ಅವರುಗಳಿಂದ ಮಾಹಿತಿ ಪಡೆದುಕೊಂಡರು.ಮಳೆಯಿಂದ ಹಾನಿಯಾದ ಪ್ರದೇಶಗಳಿಗೆ ಭೇಟಿ ನೀಡಿ, ಸ್ಥಳ ಪರಿಶೀಲಿಸಿ ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ವಿವಿಧ ಇಲಾಖೆಗಳಲ್ಲಿ ಬಾಕಿ ಇರುವ ಕಾಮಗಾರಿಗಳ ಬಗ್ಗೆ ಮುತುವರ್ಜಿ ವಹಿಸುವಂತೆ ಸೂಚನೆ ನೀಡಿ ಅನುಧಾನ ಬೇಕಾದಲ್ಲಿ ಆ್ಯಕ್ಷನ್ ಪ್ಲಾನ್ ನಲ್ಲಿ ನೀಡಲಾಗುವುದು ಎಂದು ತಿಳಿಸಿದರು.
ಹಳ್ಳಿಗಳಲ್ಲಿ ಮಳೆಯಿಂದ ಹಾನಿಯಾದ ಮನೆಗಳ ಸಮೀಕ್ಷೆ ನಡೆಸಿ ಪರಿಹಾರ ನೀಡಬೇಕು ಹಾಗೂ ಮನೆ ಮೇಲ್ಛಾವಣಿ ಅಥವಾ ಮಾಳಿಗೆ ಬಿದ್ದಲ್ಲಿ ತಕ್ಷಣವೇ ನೂರಕ್ಕೆ ನೂರು ಪರಿಹಾರ ನೀಡಬೇಕು ಎಂದು ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಎಸಿ, ತಹಶೀಲ್ದಾರ್, ತಾಲೂಕ ಪಂಚಾಯತ್ ಇಓ ಸೇರಿದಂತೆ ಅನೇಕ ಗ್ರಾಮಗಳ ಪಿಡಿಓ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಭಾಗಿಯಾಗಿದ್ದರು.
ವರದಿ :-ವೆಂಕಟಪ್ಪ ಕೆ ಸುಗ್ಗಾಲ್