Join The Telegram | Join The WhatsApp |
ಬೆಂಗಳೂರು : ರಾಜ್ಯದ ಎಲ್ಲ ಶಾಲಾ-ಕಾಲೇಜುಗಳಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಭಾವಚಿತ್ರ ಅಳವಡಿಕೆ ಮಾಡಬೇಕು, ಸಂಗೊಳ್ಳಿ ರಾಯಣ್ಣನ ಹೆಸರಿನಲ್ಲಿ ಸುಮಾರು 100 ಎಕರೆ ಪ್ರದೇಶದಲ್ಲಿ ಅಂದಾಜು 180 ಕೋಟಿ ರು. ವೆಚ್ಚದಲ್ಲಿ ಬೃಹತ್ ಮಿಲಿಟರಿ ಶಾಲೆಯನ್ನು ಸರ್ಕಾರ ಸ್ಥಾಪಿಸುವ ಉದ್ದೇಶ ಹೊಂದಿದೆಎಂದು ಸಿಎಂ ಬೊಮ್ಮಾಯಿ ಹೇಳಿದರು.
ನಿನ್ನೆ ನಗರದ ಖೋಡೆ ವೃತ್ತದಲ್ಲಿ ನಡೆದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ 191ನೇ ಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಸಿಎಂ ಮಾತನಾಡಿದರು.
ರಾಜ್ಯದ ಎಲ್ಲ ಶಾಲಾ-ಕಾಲೇಜುಗಳಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಹಾಗೂ ಸುಬಾಷ್ ಚಂದ್ರ ಬೋಸ್ ಭಾವಚಿತ್ರ ಅಳವಡಿಕೆ ಮಾಡಬೇಕು ಹಾಗೂ ಬೆಳಗಾವಿ ಸುವರ್ಣ ಸೌಧದ ಆವರಣದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಮತ್ತು ರಾಯಣ್ಣನ ಪ್ರತಿಮೆ ಸ್ಥಾಪಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದರು. ಬೆಳಗಾವಿ ಸುವರ್ಣಸೌಧಆವರಣದಲ್ಲಿ ಚೆನ್ನಮ್ಮಹಾಗೂ ರಾಯಣ್ಣನ ಪ್ರತಿಮೆ ನಿರ್ಮಿಸಲಾಗುವುದು. ಈ ಸಂಬಂಧ ಮೂರ್ತಿ ತಯಾರಕರ ಜತೆ ಮಾತುಕತೆ ನಡೆಸಿದ್ದೇವೆ.
ರಾಜ್ಯದ ಎಲ್ಲ ಶಾಲಾ-ಕಾಲೇಜುಗಳಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಭಾವಚಿತ್ರ ಅಳವಡಿಕೆ ಮಾಡಬೇಕು, ಸಂಗೊಳ್ಳಿ ರಾಯಣ್ಣನ ಹೆಸರಿನಲ್ಲಿ ಸುಮಾರು 100 ಎಕರೆ ಪ್ರದೇಶದಲ್ಲಿ ಅಂದಾಜು 180 ಕೋಟಿ ರು. ವೆಚ್ಚದಲ್ಲಿ ಬೃಹತ್ ಮಿಲಿಟರಿ ಶಾಲೆಯನ್ನು ಸರ್ಕಾರ ಸ್ಥಾಪಿಸುವ ಉದ್ದೇಶ ಹೊಂದಿದೆ. ರಕ್ಷಣಾ ಇಲಾಖೆ ಆ ಶಾಲೆಯ ಉಸ್ತುವಾರಿ ವಹಿಸಿಕೊಳ್ಳಲು ಮಾತುಕತೆ ನಡೆದಿದೆ. ಆ ಯೋಜನೆಗಾಗಿ ಈಗಾಗಲೇ ಸರ್ಕಾರ 55 ಕೋಟಿ ರು. ಬಿಡುಗಡೆ ಮಾಡಿದೆ ಎಂದರು.
Join The Telegram | Join The WhatsApp |