ಬಾಗಲಕೋಟೆ : ಜಿಲ್ಲಾ ಪಂಚಾಯತ್ ಸಭಾ ಭವನದಲ್ಲಿ ‘ಶಿಕ್ಷಣ ಇಲಾಖಾ ಪ್ರಗತಿ ಪರಿಶೀಲನಾ ಸಭೆ’ ನಡೆಸಲಾಯಿತು. ಈ ವೇಳೆ ಅವರು ಸುದ್ದಿಗಾರರ ಜೊತೆ ಮಾತನಾಡಿದರು.
ಶಾಲೆಗಳಲ್ಲಿ ಈ ವರ್ಷವೇ ಹಲವು ಬದಲಾವಣೆ ಮಾಡಲಾಗುತ್ತದೆ. ಆದರ್ಶ ಶಾಲೆಗಳಲ್ಲಿ ಈ ವರ್ಷದಿಂದಲೇ ಪಿಯುಸಿ ಕಾಲೇಜು ಆರಂಭಿಸಲು ಅನುಮತಿ ನೀಡಲಾಗಿದೆ.
ಶಿಕ್ಷಕರ ಕೊರತೆ ನೀಗಿಸಲು ಸರ್ಕಾರ ಶೀಘ್ರವೇ 16,500 ಶಿಕ್ಷಕರ ನೇಮಕಾತಿ ಮಾಡಲಾಗುತ್ತದೆ ಎಂದರು. ಶಾಲೆಗಳಿಗೆ ಮೂಲಭೂತ ಸೌಲಭ್ಯ ಒದಗಿಸಲು ಆದ್ಯತೆ ನೀಡಲಾಗುವುದು ಎಂದು ಸಚಿವರು ಹೇಳಿದರು.
ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ “ಸರ್ಕಾರಿ ಶಾಲೆಗಳ ಸುಧಾರಣೆಗೆ” ಕೈಗೊಳ್ಳಬೇಕಾದ ಹಲವಾರು ವಿಷಯಗಳ ಕುರಿತು ಸಮಗ್ರವಾಗಿ ಚರ್ಚಿಸಿ, ಅಗತ್ಯ ಸಲಹೆ-ಸೂಚನೆಗಳನ್ನು ನೀಡಲಾಯಿತು.




