ಬೆಂಗಳೂರು: ರಾಜ್ಯದಲ್ಲಿ 3 ಸಾವಿರ ಪಬ್ಲಿಕ್ ಶಾಲೆ ಆರಂಭಿಸಲು ನಿರ್ಧಾರ ಮಾಡಲಾಗಿದೆ ಅಂತ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ.
ಅವರು ಶಿಕ್ಷಣ ಇಲಾಖೆ ಅಧಿಕಾರಿಗಳ ಜೊತೆ ವಿಕಾಸಸೌಧದಲ್ಲಿ ಇಂದು ಪ್ರಗತಿ ಪರಿಶೀಲನಾ ಸಭೆ ನಡೆಸಿದ ನಂತರ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಎಲ್ಲಾ ಮಕ್ಕಳು ಶಿಕ್ಷಣ ಪಡೆಯಬೇಕು, ಸರ್ಕಾರಿ ಶಾಲೆಗಳಿಗೆ ಹೆಚ್ಚು ಬರಬೇಕು.ಹಾಗಾಗಿ, ರಾಜ್ಯದಲ್ಲಿ ಸುಮಾರು 3ಸಾವಿರ ಪಬ್ಲಿಕ್ ಶಾಲೆಗಳನ್ನು ಪ್ರಾರಂಭಿಸಲು ಉದ್ದೇಶಿಸಲಾಗಿದೆ ಅಂತ ತಿಳಿಸಿದರು.
ಇದೇ ವೇಳೆ ಅವರು ಮಾತನಾಡುತ್ತ, ಎಲ್ಲಾ ಮಕ್ಕಳು ಶಿಕ್ಷಣ ಪಡೆಯಬೇಕು, ಸರ್ಕಾರಿ ಶಾಲೆಗಳಿಗೆ ಹೆಚ್ಚು ಬರಬೇಕು. ಹಾಗಾಗಿ, ರಾಜ್ಯದಲ್ಲಿ ಸುಮಾರು 3ಸಾವಿರ ಪಬ್ಲಿಕ್ ಶಾಲೆಗಳನ್ನು ಪ್ರಾರಂಭಿಸಲು ಉದ್ದೇಶಿಸಲಾಗಿದೆ ತಿಳಿಸಿದರು.
ಇನ್ನೂ 1 ರಿಂದ 10 ನೇ ತರಗತಿ ಹಾಗೂ ಪಿಯುಸಿವರೆಗೆ ಸಭೆ ನಡೆಸಿದ್ದೇನೆ. ಕೆಲವು ಕಾರ್ಯಕ್ರಮ ಸ್ಥಗಿತಗೊಂಡಿದ್ದವು. ವಿಧಾನಸಭೆ ಅಧಿವೇಶನ ಕೂಡ ಹತ್ತಿರವಾಗ್ತಿದೆ. ಅಷ್ಟರಲ್ಲೇ ಸಮಸ್ಯೆ ಸರಿಪಡಿಸುವ ಪ್ರಯತ್ನ ನಡೆದಿದೆ. ಪ್ರಸ್ತುತ ನನಗೆ ತೃಪ್ತಿಯನ್ನು ತಂದಿದೆ ಎಂದರು.