ಬೆಂಗಳೂರು : ಶೀಘ್ರವೇ ರಾಜ್ಯ ಸರ್ಕಾರದಿಂದ 15,000 ಶಿಕ್ಷಕರ ನೇಮಕಾತಿ ಮಾಡಲಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿಕ್ಷಕರ ಕೊರತೆ ನೀಗಿ ಸಲು ಹೊಸದಾಗಿ ಶಿಕ್ಷಕರ ನೇಮಕಾತಿಗೆ ಸರ್ಕಾರ ಮುಂದಾಗಿದೆ. ಖಾಲಿಯಿರುವ ಶಿಕ್ಷಕರ ಹುದ್ದೆಗಳನ್ನು ಹಂತ-ಹಂತವಾಗಿ ಭರ್ತಿ ಮಾಡಲು ಕ್ರಮಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಸರ್ಕಾರಿ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ, ಉಚಿತ ಸಮವಸ್ತ್ರ ಪುಸ್ತಕ, ಶೂ, ಮತ್ತಿತರ ಸೌಲಭ್ಯಗಳನ್ನು ನೀಡಲಾಗುತ್ತಿದೆ. ಶಾಲೆಗಳನ್ನು ಕೆಪಿಎನ್ ಶಾಲೆಗಳನ್ನಾಗಿ ಮೇಲ್ದರ್ಜೆಗೇರಿಸಲಾಗುವುದು ಎಂದರು. ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದರು.