ಗುರುಮಾಠಕಲ್ : ಗುರುಮಾಠಕಲ್ ತಾಲೂಕಿನ ಯಾದಗಿರಿ ಜಿಲ್ಲೆಯ ಜಿಲ್ಲಾ ಉಪಾಧ್ಯಕ್ಷ ಆಶಾನ್ನ ಬುದ್ಧ ಅವರು ಸುದ್ದಿಗರರೊಂದಿಗೆ ಮಾತನಾಡಿದರು.
ಜಾತಿಯಲ್ಲಿ ಒಳ ಮೀಸಲಾತಿ ಜಾರಿ ಮಾಡುವ ಕುರಿತು ನ್ಯಾ.ನಾಗಮೋಹನ್‌ದಾಸ್ ಆಯೋಗವು ಮುಖ್ಯಮಂತ್ರಿಗಳಿಗೆ ವರದಿ ಸಲ್ಲಿಸಿದೆ. ಶೇ.7ರಷ್ಟು ಮೀಸಲಾತಿ ಎಡಗೈ ಸಮುದಾಯಗಳಿಗೆ ದೊರತರೆ ನಮಗೆ ಸ್ವಲ್ಪ ಉಸಿರಾಡಲು ಅವಕಾಶ ಆಗಲಿದೆ ಎಂದು ಮಾದಿಗ ದಂಡೋರ ಜಿಲ್ಲಾ ಉಪಾಧ್ಯಕ್ಷ ಆಶಾನ್ನ ಬುದ್ಧ ಹೇಳಿದ್ದಾರೆ.
ಗುರುಮಾಠಕಲ್ ಪ್ರವಾಸಿ ಮಂದಿರದಲ್ಲಿ ಮಾತನಾಡಿದ MRPS ಉಪಾಧ್ಯಕ್ಷ ಮಾತನಾಡಿ ಕಳೆದ 30-35 ವರ್ಷಗಳಿಂದ ಮಾದಿಗ ಸಮುದಾಯಕ್ಕೆ ಸಿಗಬೇಕಿರುವ ಮೀಸಲಾತಿ ದೊರೆಯುತ್ತಿಲ್ಲ. ಸಫಾಯಿ ಕರ್ಮಚಾರಿ ಸೇರಿ ವಿವಿಧ ಕೂಲಿ ಕೆಲಸ ಮಾಡುತ್ತಿರುವ ಸಮುದಾಯಗಳಿಗೆ ಸರ್ಕಾರದಲ್ಲಿ ಸವಲತ್ತುಗಳು ದೊರೆಯುತ್ತಿಲ್ಲ ಎಂದರು.
ಹೀಗಾಗಿ ಒಳ ಮೀಸಲಾತಿ ಜಾರಿ ಆಗಬೇಕು ಎಂಬ ಹೋರಾಟ ಶುರುವಾಯಿತು. ಆ.1 ರಂದು ಸುಪ್ರೀಂ ಕೋರ್ಟ್ ಇದಕ್ಕೆ ಪೂರಕ ಆದೇಶ ಹೊರಡಿಸಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಗಮೋಹನ್‌ದಾಸ್ ಆಯೋಗ ರಚಿಸಿದರು. ಇದೀಗ ವರದಿ ಸಲ್ಲಿಕೆಯಾಗಿದ್ದು ಕುತೂಹಲ, ಆತಂಕ ಕಾಡುತ್ತಿದೆ ಎಂದು ಹೇಳಿದರು. ನ್ಯಾ.ಎ.ಜೆ. ಸದಾಶಿವ ಅವರು ಎಡಗೈ ಸಮುದಾಯಗಳಿಗೆ ಶೇ.6 ರಷ್ಟು ಮೀಸಲಾತಿ ಶಿಫಾರಸು ಮಾಡಿದ್ದರು. ಆಗ ಪರಿಶಿಷ್ಟ ಜಾತಿ ಮೀಸಲಾತಿ ಶೇ.15 ರಷ್ಟು ಇತ್ತು. ಈಗ ಮೀಸಲಾತಿ ಪ್ರಮಾಣ ಶೇ.17ಕ್ಕೆ ಹೆಚ್ಚಳ ಆಗಿದೆ. ಹೀಗಾಗಿ ಶೇ.7 ರಷ್ಟು ಆದರೂ ನೀಡಬೇಕು ಎಂಬುದು ನಮ್ಮ ಅಭಿಪ್ರಾಯ ಎಂದು ಮಾದಿಗ ದಂಡೊರ್ ಜಿಲ್ಲಾ ಉಪಾಧ್ಯಕ್ಷ ಆಶಾನ್ನ ಬುದ್ಧ ಹೇಳಿದರು.
ವರದಿ : ರವಿ ಬುರನೋಳ್




