Ad imageAd image

ಇಟ್ಕಲ್ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ರಕ್ತ ಪರೀಕ್ಷೆ ಸಿಬ್ಬಂದಿ ನೇಮಕಾತಿ ಮಾಡುವಂತೆ ಮಹಾಂತೇಶ ಮನವಿ.

Bharath Vaibhav
ಇಟ್ಕಲ್ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ರಕ್ತ ಪರೀಕ್ಷೆ ಸಿಬ್ಬಂದಿ ನೇಮಕಾತಿ ಮಾಡುವಂತೆ ಮಹಾಂತೇಶ ಮನವಿ.
WhatsApp Group Join Now
Telegram Group Join Now

ಸೇಡಂ : ಇಟ್ಕಲ್ ಪ್ರಾಥಮಿಕ ಆರೋಗ್ಯ ಕೇಂದ್ರ ಆಸ್ಪತ್ರೆಯಲ್ಲಿ ರಕ್ತ ಪರೀಕ್ಷೆಗೆ ಸಂಬಂಧಿಸಿದ ಎಲ್ಲಾ ಸಲಕರಣೆಗಳು ಲಭ್ಯವಿವೆ ಆದರೂ ಇದಕ್ಕೆ ಸಂಬಂಧಿಸಿದ ಸಿಬ್ಬಂದಿ ಇಲ್ಲದ ಕಾರಣ ಇಲ್ಲಿನ ಜನರಿಗೆ ತುಂಬಾ ತೊಂದರೆಯಾಗುತ್ತಿದೆ.

ಇದರಿಂದ ರೋಗಿಗಳು ದೂರದ ಇತರ ಆಸ್ಪತ್ರೆಗಳಿಗೆ ಹೋಗುವುದು ಅನಿವಾರ್ಯವಾಗಿದ್ದು, ಸಮಯ ಮತ್ತು ಬಡ ರೋಗಿಗಳು ಸಂಕಷ್ಟ ಅನುಭವಿಸುತ್ತಿದ್ದಾರೆ.

ಕೂಡಲೇ ಸಿಬ್ಬಂದಿಯವರನ್ನು ನೇಮಕ ಮಾಡಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕೆಂದು ತಾಲೂಕ ಆರೋಗ್ಯಾಧಿಕಾರಿಗಳಿಗೆ ಸಮಾಜ ಸೇವಕರಾದ ಮಹಾಂತೇಶ ಸಾಹುಕಾರ್ ಶಕಲಾಸಪಲ್ಲಿ ಅವರು ಮನವಿ ಪತ್ರ ಸಲ್ಲಿಸಿದರು.

ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಆರೋಗ್ಯಾಧಿಕಾರಿಗಳ ಗಮನಕ್ಕೆ ತರಲು ತಿಳಿಸಿದರು.

ವರದಿ : ವೆಂಕಟಪ್ಪ ಕೆ ಸುಗ್ಗಾಲ್.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!