ಯಲಹಂಕ : ಕರ್ನಾಟಕ ರಾಜ್ಯ ಸರ್ಕಾರಿ ಅರೆ ಸರ್ಕಾರಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ನೌಕರರ ಸಂಘದ ಯಲಹಂಕ ತಾಲೂಕ ಘಟಕದ ಅಧ್ಯಕ್ಷ ಅಶೋಕ್ ಕಲಾದಗಿ ಅವರ ನೇತೃತ್ವದಲ್ಲಿ ದಿನಾಂಕ :7-10-2025ರಂದು ಮಂಗಳವಾರ ಸಾಯಂಕಾಲದ 06 ಗಂಟೆಗೆ “ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ”ವನ್ನು ಯಲಹಂಕ ಕಚೇರಿಯಲ್ಲಿ ಆಯೋಜಿಸಲಾಗಿದೆ.
ಈ ಅದ್ಬುತ ಕಾರ್ಯ ಕ್ರಮಕ್ಕೆ ಕರ್ನಾಟಕ ರಾಜ್ಯ ಸರ್ಕಾರಿ ಅರೆ ಸರ್ಕಾರಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ನೌಕರರ ಸಂಘದ ರಾಜ್ಯ, ಜಿಲ್ಲಾ ಮತ್ತು ತಾಲೂಕು ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸ ಬೇಕೆಂದು ರಾಜ್ಯ ಪ್ರಧಾನ ಕಾರ್ಯದರ್ಶಿ ಸುಧಾಕರ್ ಎಸ್ ಜಡಗಿ ಬಿ ವಿ ನ್ಯೂಸ್-5 ಗೆ ಮಾತನಾಡಿದರು.
ವರದಿ : ಅಯ್ಯಣ್ಣ ಮಾಸ್ಟರ್




