ಅಥಣಿ: ಪಟ್ಟಣದ ಮಹಾತ್ಮ ಜ್ಯೋತಿಬಾ ಫುಲೆ ವೃತ್ತದಲ್ಲಿ ಕ್ರಾಂತಿಸೂರ್ಯ ಮಹಾತ್ಮ ಜ್ಯೋತಿಬಾ ಫುಲೆ ಅವರ 199ನೇ ಜಯಂತಿಯನ್ನು ಅತ್ಯಂತ ಸಡಗರದಿಂದ ಆಚರಿಸಲಾಯಿತು. ಇದೇ ಶುಭ ಸಂದರ್ಭದಲ್ಲಿ, ಪಟ್ಟಣದ ಶ್ರೀ ಬಸವೇಶ್ವರ ವೃತ್ತದಿಂದ ಜತ್ತ ರಸ್ತೆಯವರೆಗಿನ ಮಾರ್ಗಕ್ಕೆ “ಶ್ರೀ ಮಹಾತ್ಮ ಜ್ಯೋತಿಬಾ ಫುಲೆ ರಸ್ತೆ” ಎಂದು ಅಧಿಕೃತವಾಗಿ ನಾಮಕರಣ ಮಾಡಲಾಯಿತು. ಕಾರ್ಯಕ್ರಮದಲ್ಲಿ ನಾಮಫಲಕಗಳ ಉದ್ಘಾಟನೆ ಹಾಗೂ ವೃತ್ತದ ಕಟ್ಟಡದ ಶಂಕುಸ್ಥಾಪನೆಯನ್ನು ನೆರವೇರಿಸಲಾಯಿತು.
ಈ ಸಂಧರ್ಭದಲ್ಲಿ ಹಿರಿಯ ಕಾಂಗ್ರೆಸ್ ಮುಖಂಡರಾದ ಶ್ರೀ ಸದಾಶಿವ ಕೆ. ಬುಟಾಲಿ ಹಾಗೂ ಪುರಸಭೆ ಅಧ್ಯಕ್ಷರಾದ ಶ್ರೀಮತಿ ಶಿವಲೀಲಾ ಬುಟಾಲಿ ಅವರು ಕಾರ್ಯಕ್ರಮ ಉದ್ಘಾಟಿಸಿ, ಸನ್ಮಾನ ಸ್ವೀಕರಿಸಿದರು. ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದ ಕ್ಷೇತ್ರದ ಶಾಸಕರು ಹಾಗೂ ಮಾಜಿ ಉಪಮುಖ್ಯಮಂತ್ರಿಗಳಾದ ಶ್ರೀ ಲಕ್ಷ್ಮಣ ಸವದಿ ಅವರು ಉಪಸ್ಥಿತರಿದ್ದು ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಶೆಟ್ಟರ ಮಠದ ಪರಮ ಪೂಜ್ಯರು, ಪುರಸಭೆ ಸದಸ್ಯರು, ಮಾಜಿ ಗ್ರಾಮ ಪಂಚಾಯತ್ ಸದಸ್ಯರು, ನಗರದ ಪ್ರಮುಖ ಮುಖಂಡರು ಹಾಗೂ ಸಮಾಜದ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ವರದಿ: -ಪ್ರಲ್ಹಾದ ವಾಘಮೋರೆ




