ಬೆಂಗಳೂರು : ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘಗಳ ಪರಿಷತ್ತು ಮತ್ತು ಮಹಾನಗರ ಪಾಲಿಕೆ ನೌಕರರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸರ್ಕಾರಿ ನೌಕರರಿಗೆ ನೀಡುವ ಸೌಲಭ್ಯಗಳು ಪಾಲಿಕೆ ನೌಕರರಿಗೂ ನೀಡಬೇಕು ಎಂದು ಮಹಾನಗರ ಪಾಲಿಕೆಗಳ ಸಾವಿರಾರು ನೌಕರರು ಸಾಮೂಹಿಕ ರಜೆ ಹಾಕಿ ಬೆಂಗಳೂರು ನಗರದ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.

ಈ ಪ್ರತಿಭಟನೆಗೆ ಕರ್ನಾಟಕ ರಾಜ್ಯ ಸರ್ಕಾರಿ ಅರೆಸರ್ಕಾರಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ನೌಕರರ ಸಂಘದ ರಾಜ್ಯಧ್ಯಕ್ಷ ಮಹೇಶ್ ಸಿ ಹುಬಳಿ ಅವರು ಕಲಬುರ್ಗಿಯಿಂದ ದೂರವಾಣಿ ಕರೆ ಹೋರಾಟಕ್ಕೆ ಸಂಪೂರ್ಣ ಬೆಂಬಲ ಎಂದು ಮಹೇಶ್ ಸಿ ಹುಬಳಿ ತಿಳಿಸಿದ್ದಾರೆ.

ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ಅರೆಸರ್ಕಾರಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ನೌಕರರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಸುಧಾಕರ ಎಸ್ ಜಡಗಿ, ಬೆಂಗಳೂರು ಜಿಲ್ಲಾ ಅಧ್ಯಕ್ಷ ಶ್ರೀಧರ ಕೊಟ್ರೆ, ಪ್ರಧಾನ ಕಾರ್ಯದರ್ಶಿ ಕೃಷ್ಣ ಆರ್.ಎಲ್, ಉಪಾಧ್ಯಕ್ಷ ರಮೇಶ್ ಆರ್. ಐ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಈಶ್ವರ್, ಜಿಲ್ಲಾ ಪದಾಧಿಕಾರಿಗಳು ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನೌಕರರು ಬೆಂಬಲ ಸೂಚಿಸಿ ಭಾಗವಹಿಸಿದ್ದರು ಎಂದು . ರಾಜ್ಯ ಪ್ರಧಾನ ಕಾರ್ಯದರ್ಶಿ ಸುಧಾಕರ್ ಎಸ್ ಜಡಗಿ ಅವರು ಬಿ.ವಿ ನ್ಯೂಸ್-5ಯ ಮಾದ್ಯಮದವರಿಗೆ ಮಾತನಾಡಿದರು.
ವರದಿ : ಅಯ್ಯಣ್ಣ ಮಾಸ್ಟರ್




