ಬೆಂಗಳೂರು : ನಗರದ ಚಾಮರಾಜಪೇಟೆಯಲ್ಲಿ ವ್ಯಕ್ತಿಯೊಬ್ಬರ ಹಸುವಿನ ಕೆಚ್ಚಲನ್ನೇ ಕಿಡಿಗೇಡಿಗಳು ಕೊಯ್ದು ದುಷ್ಕೃತ್ಯವನ್ನು ಮೆರೆಯಲಾಗಿತ್ತು. ಈ ಸಂಬಂಧ ಈಗ ಕಾಟನ್ ಪೇಟೆ ಠಾಣೆಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಕಾಟನ್ ಪೇಟೆ ಪೊಲೀಸರು ಹಸುಗಳ ಕೆಚ್ಚಲು ಕೊಯ್ದ ಪ್ರಕರಣ ಸಂಬಂಧ ಆರೋಪಿಯನ್ನು ಬಂಧಿಸಿದ್ದು, ಘಟನಾ ಸ್ಥಳದಲ್ಲಿ ಸ್ಥಳ ಮಹಜರು ನಡೆಸಿದ್ದಾರೆ.ಆದರೆ ಪೊಲೀಸರು ಆರೋಪಿಯ ಹೆಸರನ್ನು ಬಹಿರಂಗ ಪಡಿಸಿಲ್ಲ.
ಬೆಂಗಳೂರಿನಲ್ಲಿ ಹಸುವಿನ ಕೆಚ್ಚಲು ಕೊಯ್ದ ದುಷ್ಕರ್ಮಿಗಳ ಕ್ರೌರ್ಯಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಪ್ರತಿಪಕ್ಷ ನಾಯಕ ಆರ್.ಅಶೋಕ್ ಉಗ್ರ ಹೋರಾಟದ ಎಚ್ಚರಿಕೆಯನ್ನು ನೀಡಿದ್ದರು.
ಈ ಬೆನ್ನಲ್ಲೇ ಬೆಂಗಳೂರಿನ ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಾಣಿ ಹಿಂಸಾಚಾರ ತಡೆ ಕಾಯ್ದೆಯಡಿ ಕಿಡಿಗೇಡಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿತ್ತು. ಇದೀಗ ಆರೋಪಿಯನ್ನು ಬಂಧಿಸಲಾಗಿದೆ.
ಚಾಮರಾಜಪೇಟೆಯ ವಿನಾಯಕನಗರದಲ್ಲಿ ಬೈಕ್ ನಲ್ಲಿ ಬಂದ ಕಿಡಿಗೇಡಿಗಳು ರಸ್ತೆಯಲ್ಲಿ ಮಲಗಿದ್ದ 3 ಹಸುವಿನ ಕೆಚ್ಚಲು ಕೊಯ್ದು ಎಸ್ಕೇಪ್ ಆಗಿದ್ದರು. ಗಾಯಗೊಂಡ ಹಸುಗಳಿಗೆ ಚಾಮರಾಜಪೇಟೆ ಪಶು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.