ಶಬರಿಮಲೆ: ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಇಂದು ಮಕರ ಜ್ಯೋತಿ ದರ್ಶನವಾಗಲಿದೆ.
ಸಂಕ್ರಾಂತಿ ಪ್ರಯುಕ್ತ ವಿಶೇಷ ಪೂಜೆ, ದರ್ಶನ ಪಡೆಯಲು 1.5 ಲಕ್ಷ ಭಕ್ತರು ಭಾಗವಹಿಸಿದ್ದಾರೆ. ಸಂಜೆ ಪೊನ್ನಂಬಲಮೇಡು ಬೆಟ್ಟದಲ್ಲಿ ಮಕರ ಜ್ಯೋತಿ ದರ್ಶನವಾಗಲಿದ್ದು, ಇದನ್ನು ಕಣ್ತುಂಬಿಕೊಳ್ಳಲು ಭಕ್ತರು ಕಾತರರಾಗಿದ್ದಾರೆ.
ಸಂಜೆ 6 ಗಂಟೆಯಿಂದ ಅಯ್ಯಪ್ಪ ಸ್ವಾಮಿ ಸನ್ನಿಧಿಯಲ್ಲಿ ವಿವಿಧ ಕಾರ್ಯಕ್ರಮಗಳು ನಡೆಯಲಿವೆ. ಜನವರಿ 19ರಂದು ಮಕರವಿಳಕ್ಕು ಹಬ್ಬ ಮುಕ್ತಾಯವಾಗಲಿದೆ. ಈಗಾಗಲೇ ಲಕ್ಷಾಂತರ ಭಕ್ತರು ಮಕರ ಜ್ಯೋತಿ ದರ್ಶನಕ್ಕಾಗಿ ಶಬರಿಮಲೆಗೆ ಆಗಮಿಸಿದ್ದಾರೆ.