—————ಮತದಾರರಲ್ಲಿ ಶಾಸಕರಾದ ಬಿ.ಡಿ ಪಾಟೀಲ್ & ಚೆನ್ನರಾಜು ಹಟ್ಟಿ ಹೊಳಿ ಮನವಿ

ಕಿತ್ತೂರು: ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲ್ಲೂಕಿನ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ಚುನಾವಣೆ ಕಾವು ದಿನೇ ದಿನೇ ಜೋರಾಗುತ್ತಿದ್ದು, ಇಂದು ಮಲಪ್ರಭಾ ಸಕ್ಕರೆ ಕಾರ್ಖಾನೆ ಚುನಾವಣೆಗೆ ಶಾಸಕರಾದ ಬಾಬಾ ಸಾಹೇಬ್ ಪಾಟೀಲ್, ಚೆನ್ನರಾಜು ಹಟ್ಟಿಹೊಳಿ ಹಾಗೂ ವಿಠಲ ಹಲಗೇಕರ್ ನೇತೃತ್ವದ ಮಲಪ್ರಭಾ ಸಕ್ಕರೆ ಕಾರ್ಖಾನೆ ಪುನಶ್ಚೇತನ ರೈತರ ಪ್ಯಾನಲ್ ವತಿಯಿಂದ ಚುನಾವಣೆ ಅಧಿಕಾರಿ ಪ್ರಭಾವತಿ ಪಾಟೀಲರಿಗೆ ಎಲ್ಲಾ 15 ಜನ ಸದಸ್ಯರು ನಾಮ ಪತ್ರ ಸಲ್ಲಿಸಿದರು.

ನಂತರ ನಮ್ಮ ನ್ಯೂಸ್ ಸಮೂಹದ ರಾಜ್ಯ ಉಪ ಸಂಪಾದಕ ಬಸವರಾಜು ನಡೆಸಿದ ಸಂವಾದದಲ್ಲಿ ಮಾತನಾಡಿದ ಕಿತ್ತೂರು ಶಾಸಕ ಬಾಬಾ ಸಾಹೇಬ್ ಪಾಟೀಲ್ ಹಾಗೂ ವಿಧಾನ ಪರಿಷತ್ ಸದಸ್ಯ ಚೆನ್ನರಾಜು ಹಟ್ಟಿಹೊಳಿಯವರು ಮಲಪ್ರಭಾ ಸಕ್ಕರೆ ಕಾರ್ಖಾನೆಯ ಹಿತದೃಷ್ಟಿಯಿಂದ ಪುನಶ್ಚೇತನಕ್ಕಾಗಿ ನಮಗೆ ಮತ ನೀಡಿ ಎಂದು ಮನವಿ ಮಾಡಿದ್ದಾರೆ.
ವರದಿ: ಬಸವರಾಜು




