——————————-ಬಾಯ್ಲರ್ ಪೂಜಾ ಕಾರ್ಯಕ್ರಮ
ಕಿತ್ತೂರು: ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲ್ಲೂಕಿನ ಎಂ.ಕೆ. ಹುಬ್ಬಳ್ಳಿಯ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ 2025–26ನೇ ಸಾಲಿನ ಕಬ್ಬು ನುರಿಸುವ ಹಂಗಾಮು ಹಾಗೂ ಬಾಯ್ಲರ್ ಪ್ರದೀಪನ ಪೂಜಾ ಕಾರ್ಯಕ್ರಮಕ್ಕೆ ಅದ್ದೂರಿಯಾಗಿ ಚಾಲನೆ ನೀಡಲಾಯಿತು.

ಸಾನಿಧ್ಯವನ್ನು ಬೆಳಗಾವಿ ರುದ್ರಾಕ್ಷಿಮಠದ ಶ್ರೀ ಅಲ್ಲಮಪ್ರಭು ಸ್ವಾಮೀಜಿ, ಕಿತ್ತೂರು ರಾಜಗುರು ಸಂಸ್ಥಾನ ಕಲ್ಮಠದ ಶ್ರೀ ಮಡಿವಾಳ ರಾಜಯೋಗಿಂದ್ರ ಸ್ವಾಮೀಜಿ, ಕಾದರವಳ್ಳಿ ಸೀಮಿಮಠದ ಡಾ. ಪಾಲಾಕ್ಷ ಶಿವಯೋಗಿಶ್ವರ ಸ್ವಾಮೀಜಿ, ಶ್ರೀರಾಮ ಮಂದಿರದ ಗುರುಪುತ್ರ ಮಹಾರಾಜರು, ಬೈಲೂರು ನಿಶ್ಕಲ ಮಂಟಪದ ಶ್ರೀ ನಿಜಗುಣಾನಂದ ಸ್ವಾಮೀಜಿ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಕರ್ನಾಟಕ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಶ್ರೀಮತಿ ಲಕ್ಷ್ಮೀ ಹೆಬ್ಬಾಳಕರ್, ಶಾಸಕರಾದ ಬಾಬಾಸಾಹೇಬ ಪಾಟೀಲ, ಕಾರ್ಖಾನೆಯ ಉಪಾಧ್ಯಕ್ಷರಾದ ಶಿವನಗೌಡ ಪಾಟೀಲ, ಕಾರ್ಖಾನೆ ವ್ಯವಸ್ಥಾಪಕ ನಿರ್ದೇಶಕರಾದ ಮೋಹನ ಹಿರೇಮಠ, ಕಾಡಾ ಅಧ್ಯಕ್ಷರಾದ ಯುವರಾಜ ಕದಂ, ಶಂಕರಗೌಡ ಪಾಟೀಲ, ಬಸವರಾಜ ಸಾಣಿಕೊಪ್ಪ, ಸುರೇಶ ಇಟಗಿ ಹಾಗೂ ನಿರ್ದೇಶಕರು, ರೈತರು ಮತ್ತು ಕಾರ್ಖಾನೆ ನೌಕರರು, ಕಾರ್ಮಿಕರು ಉಪಸ್ಥಿತರಿದ್ದರು.
ನಂತರ ನಮ್ಮ ನ್ಯೂಸ್ ಸಮೂಹದ ರಾಜ್ಯ ಉಪ ಸಂಪಾದಕ ಬಸವರಾಜು ನಡೆಸಿದ ಸಂವಾದದಲ್ಲಿ ಮಾತನಾಡಿದ ಸಚಿವರು ಆದ ಲಕ್ಸ್ಮಿ ಹೆಬ್ಬಾಳ್ಕರ್, ಶಾಸಕ ಬಾಬಾ ಸಾಹೇಬ್ ಪಾಟೀಲ್ ಹಾಗೂ ಕಾರ್ಖಾನೆ ಅಧ್ಯಕ್ಷರು ಆದ ಚೆನ್ನರಾಜು ಹಟ್ಟಿಹೊಳಿ ಹಾಗೂ ವ್ಯವಸ್ಥಾಪಕ ನಿರ್ದೇಶಕ ಮೋಹನ್ ಹಿರೇಮಠ ರವರು ಮಾತನಾಡಿ ಮಲಪ್ರಭಾ ಸಕ್ಕರೆ ಕಾರ್ಖಾನೆ 2025-26 ನೇ ಸಾಲಿನ ಕಬ್ಬು ನುರಿಸುವ ಹಂಗಾಮು ಹಾಗೂ ಸವಾಲುಗಳ ಬಗ್ಗೆ ಮುಕ್ತವಾಗಿ ಮಾತನಾಡಿದ್ದಾರೆ.
ವರದಿ: ಬಸವರಾಜು




