Ad imageAd image

ಇಂಡಿಯಾ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರು: ಮಾಳ್ವಿಕಾ ಅವಿನಾಶ ಪ್ರಶ್ನೆ

Bharath Vaibhav
ಇಂಡಿಯಾ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರು: ಮಾಳ್ವಿಕಾ ಅವಿನಾಶ ಪ್ರಶ್ನೆ
WhatsApp Group Join Now
Telegram Group Join Now

ಬೆಳಗಾವಿ: –ಎನ್ ಡಿ ಎ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಮೋದಿಯವರು, ಆದರೆ ಇಂಡಿಯಾ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರು ಎಂದು ಅವರು ಹೇಳಬೇಕು. ಪ್ರಧಾನಿ ಯಾರು ಆಗುತ್ತಾರೆ ಎಂಬ ಬಗ್ಗೆ ಅವರಲ್ಲೆ ಗೊಂದಲ ಇದೆ ಎಂದು ರಾಜ್ಯ ಬಿಜೆಪಿ ವಕ್ತಾರೆ ಮಾಳ್ವಿಕಾ ಅವಿನಾಶ ಅವರು ಹೇಳಿದ್ದಾರೆ.‌

ಇಂದು ನಗರದ ಬಿಜೆಪಿ ಮಾಧ್ಯಮ ಕಾರ್ಯಾಲಯದಲ್ಲಿ ಮಾದ್ಯಮಗೊಷ್ಠಿ ನಡೆಸಿ ಮಾತನಾಡಿದ ಅವರು, ನಾಳೆ ದಕ್ಷಿಣ ಕರ್ನಾಟದ 14 ಕ್ಷೇತ್ರಕ್ಕೆ ಮತದಾನ ನಡೆಯಲಿದೆ ಅಲ್ಲಿನ ಜನ ಉತ್ತಮ ಬೆಂಬಲ ನೀಡುತ್ತಿದ್ದಾರೆ. ಎರಡನೆ ಚರಣದಲ್ಲಿ ಉತ್ತರ ಕರ್ನಾಟಕದ 14 ಸ್ಥಾನಕ್ಕೆ ಮಾರ್ಚ 7 ರಂದು ಮತದಾನ ನಡೆಯಲಿದೆ.

ಇಲ್ಲಿಯೂ ಜನ ಉತ್ತಮ ಬೆಂಬಲ ಸೂಚಿಸುತ್ತಿದ್ದಾರೆ.‌ 2014 ರ ಮುಂಚೆ ಭಾರತದಲ್ಲಿ ಸಾಕಷ್ಟು ಭ್ರಷ್ಟಾಚಾರ ಇತ್ತು, ಆದರೆ 2014 ರ ನಂತರ ಮೋದಿ ಸರ್ಕಾರದಲ್ಲಿ ಸಾಕಷ್ಟು ಅಭಿವೃದ್ಧಿ ಆಗಿದೆ.‌ ಕಳೆದ 10 ವರವರ್ಷಗಳಲ್ಲಿ ಭಾರತದ ಆರ್ಥಿಕತೆ 5ನೇ ಸ್ಥಾನಕ್ಕೆ ಬಂದಿದೆ. ಕೋವಿಡ್ ಇದ್ದರು ದೇಶ ಅಭಿವೃದ್ಧಿ ಸಾಧಿಸಿದೆ ಎಂದು ತಿಳಿಸಿದರು.

ಜೂನ್ 4 ರ ನಂತರ ಮೋದಿಯವರು ಪ್ರಧಾನಿಯಾದ ಬಳಿಕ ಕೆಲವೆ ವರ್ಷಗಳಲ್ಲಿ ಭಾರತವನ್ನು 3 ಅತೀ ದೊಡ್ಡ ಆರ್ಥಿಕ ದೇಶವನ್ನು ಮಾಡುವ ಗುರಿ ಹೊಂದಿದ್ದಾರೆ. ಹಾಗಾಗಿ ಜಗದೀಶಗ ಶೆಟ್ಟರ್ ಅವರನ್ನು ಬೆಳಗಾವಿ ಕ್ಷೇತ್ರದಲ್ಲಿ ಗೆಲ್ಲಿಸಬೇಕು. ಮೋದಿಯವರ ಆಡಳಿತದಲ್ಲಿ ಬೆಳಗಾವಿಯಲ್ಲಿ ಸಾಕಷ್ಟು ಅಭಿವೃದ್ಧಿ ಆಗಿದೆ ಎಂದು ತಿಳಿಸಿದರು.‌

ಮೋದಿ ಪ್ರವಾಸದಲ್ಲಿ ಬದಲಾವಣೆ: ಏ. 27ಕ್ಕೆ ಆಗಮಿಸಿ ಬೆಳಗಾವಿಯಲ್ಲಿ ವಾಸ್ತವ್ಯ

ಬೆಳಗಾವಿಯಲ್ಲಿ ಮೋದಿಯವರು ಕೈಗೊಂಡಿದ್ದ ಬೆಳಗಾವಿ ಪ್ರವಾಸದ ಸಮಯದಲ್ಲಿ ಬದಲಾವಣೆ ಆಗಿದೆ. ಏ. 28 ರ ಬದಲಾಗಿ 27 ರಂದೆ ಬೆಳಗಾವಿಗೆ ಆಗಮಿಸಿ ವಾಸ್ತವ್ಯ ಹುಡಲಿದ್ದಾರೆ ಎಂದು ಬೆಳಗಾವಿ ಬಿಜೆಪಿ ಗ್ರಾಮೀಣ ಜಿಲ್ಲಾದ್ಯಕ್ಷ ಶುಭಾಸ ಪಾಟೀಲ್ ಹೇಳಿದ್ದಾರೆ.

ಮೊದಿಯವ ಕಾರ್ಯಕ್ರಮದ ಸಮಯ ಬದಲಾಗಿದೆ. ಏ. 28 ರಂದು ಬೆಳಗ್ಗೆ 12 ಗಂಟೆಗೆ ವೇಧಿಕೆ ಕಾರ್ಯಕ್ರಮ ಆಗಲಿದೆ ಎಂದು ಹೇಳಲಾಗುತ್ತಿತ್ತು ಆದರೆ 28 ರಂದು 10 ಗಂಟೆ ವೇದಿಕೆ ಕಾರ್ಯಕ್ರಮ ನಡೆಯಲಿದೆ.‌ ಮಹಾರಾಷ್ಟ್ರದಿಂದ ರಸ್ತೆ ಮೂಲಕ ಬೆಳಗಾವಿಗೆ ಏ 27 ರಂದು ಬಂದು ಬೆಳಗಾವಿಯ ಖಾಸಗಿ ಹೋಟೆಲ್ ನಲ್ಲಿ ಮೋದಿಯವರು ವಾಸ್ತವ್ಯ ಹುಡಲಿದ್ದಾರೆ ಎಂದು ತಿಳಿಸಿದರು.‌

ಈ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ದೇವಗೌಡ, ಮಾಜಿ ಸಿಎಂ ಕುಮಾರ ಸ್ವಾಮಿ, ಮಾಜಿ ಸಿಎಂ ಯಡಿಯೂರಪ್ಪ, ವಿಜೇಂದ್ರ ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಇರಲಿದ್ದಾರೆ ಎಂದು ತಿಳಿಸಿದರು.

ಈ ವೇಳೆ ಬಿಜೆಪಿ ಬಿಜೆಪಿ ಮಹಾನಗರ ಅಧ್ಯಕ್ಷೆ ಗೀತಾ ಸೂತಾರ, ಬಿಜೆಪಿ ಮುಖಂಡೆ ಭಾರತಿ ಮಗದುಮ, ಎಫ್ ಎಸ್ ಸಿದ್ದನಗೌಡ, ಹನಮಂತ ಕೊಂಗಾಲಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ವರದಿ ಪ್ರತೀಕ ಚಿಟಗಿ

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!