ಚಿಟಗುಪ್ಪ: ಬೈಕ್ ಮೇಲೆ ತೆರಳುವಾಗ ಗಾಳಿಪಟದ ದಾರ ತಾಗಿ ಕತ್ತು ಸೀಳಿದ್ದರಿಂದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಬೀದರ ಜಿಲ್ಲೆಯ ಚಿಟಗುಪ್ಪ ತಾಲ್ಲೂಕಿನ ತಾಳಮಡಗಿಯಲ್ಲಿ ಬುಧವಾರ ಬೆಳಗ್ಗೆ ನಡೆದಿದೆ.
ಸಂಜುಕುಮಾರ ಗುಂಡಪ್ಪ ಹೊಸಮನಿ ಬಂಬಳಗಿ (48) ಮೃತ ವ್ಯಕ್ತಿ.ಮೃತರಿಗೆ ಪತ್ನಿ,ಪುತ್ರ ಹಾಗೂ ಮೂವರು ಪುತ್ರಿಯರಿದ್ದಾರೆ.
ಸಂಕ್ರಾಂತಿ ಹಬ್ಬದ ರಜೆ ಇರುವುದರಿಂದ ಹುಮನಾಬಾದ್ ಪಟ್ಟಣದ ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಮಗಳನ್ನು ಕರೆತರಲು ಬಂಬಳಗಿಯಿಂದ ಹುಮನಾಬಾದಗೆ ಬೈಕ್ ಮೇಲೆ ತೆರಳುವಾಗ ಈ ಘಟನೆ ನಡೆದಿದೆ.
ಚಿಟಗುಪ್ಪ ತಾಲ್ಲೂಕಿನ ತಾಳಮಡಗಿ ಗ್ರಾಮದ ಸೇತುವೆ ಬಳಿ ಈ ಘಟನೆ ಜರುಗಿದೆ.ಕತ್ತಿಗೆ ದಾರ ಸಿಲುಕಿ ರಕ್ತಸ್ರಾವವಾಗಿ ಕೆಳಗೆ ಬಿದ್ದು ಹೊರಳಾಡಿ ಕೊನೆಯುಸಿರೆಳೆದಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳಿಂದ ತಿಳಿದು ಬಂದಿದೆ.




