ಬಾಗೇಪಲ್ಲಿ: ಸದೃಢ ಭಾರತದ ನಿರ್ಮಾಣ-ಕ್ಕಾಗಿ ಪ್ರತಿಯೊಬ್ಬ ಅರ್ಹ ಮತದಾರರೂ ಜವಾಬ್ದಾ-ರಿಯಿಂದ ಮತ ಚಲಾಯಿಸಬೇಕು.
ಯಾವುದೇ ಧರ್ಮ, ಜಾತಿ, ಹಣ ಅಥವಾ ಆಮಿಷಗಳಿಗೆ ಬಲಿಯಾಗದೇ ನೈತಿಕವಾಗಿ ಮತದಾನ ಮಾಡಬೇಕು. ನಿಮ್ಮ ಒಂದು ಮತ ದೇಶದ ಭವಿಷ್ಯವನ್ನು ಬದಲಿಸಬಲ್ಲದು’ ಗೌರವಾನ್ವಿತ ಸಿವಿಲ್ ಹಾಗೂ ಎಂದು ಜೆ.ಎಂ.ಎಫ್.ಸಿ. ನ್ಯಾಯಾಧೀಶ ಮಂಜುನಾಥಚಾರಿ ಹೇಳಿದರು.
ತಾಲ್ಲೂಕು ಪಂಚಾಯತಿ ಮತ್ತು ತಾಲ್ಲೂಕು ಸ್ವೀಪ್ ಸಮಿತಿ, ತಾಲ್ಲೂಕು ಆಡಳಿತ ಹಾಗೂ ತಾಲ್ಲೂಕು ಕಾನೂನು ಸೇವಾ ಸಮಿತಿ ವತಿಯಿಂದ 2 ಪಟ್ಟಣದ ನ್ಯಾಷನಲ್ ಪದವಿ ಪೂರ್ವ 5 ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬಾಗೇಪಲ್ಲಿ ತಾಲೂಕು ಗಡಿ ಪ್ರದೇಶ ಗಡಿ ಪ್ರದೇಶಕ್ಕೆ ಸಿಗಬೇಕಾಗಿರುವ ಸೌಲಭ್ಯಗಳು ಸಿಗುತ್ತಿಲ್ಲ
ಆ ಕಡೆ ಆಂಧ್ರಪ್ರದೇಶ ಈ ಕಡೆ ಕರ್ನಾಟಕದಿಂದಲೂ ಸಹ ಸರಿಯಾದ ರೀತಿಯಲ್ಲಿ ಶಿಕ್ಷಣ ಆರೋಗ್ಯ ಸೂಕ್ತವಾದ ರಸ್ತೆ ಸೌಲಭ್ಯಗಳು ಸಿಗುತ್ತಿಲ್ಲ ಕಾರಣ ಇಷ್ಟೇ ನಾವು ಆರಿಸುವಂತ ಜನಪ್ರತಿನಿಧಿಗಳನ್ನ ಒಳ್ಳೆಯವರನ ಆಯ್ಕೆ ಮಾಡಬೇಕು ಇಲ್ಲವಾದಲ್ಲಿ ಮುಂದಿನ ಮುಂದಿನ ಪೀಳಿಗೆಗೂ ಕಷ್ಟ ಸಾಧ್ಯವಾಗುತ್ತದೆ. ಯುವಜನತೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಪ್ರತಿನಿಧಿಗಳಾಗುವಂತಹ ನಿರ್ಧಾರಕ್ಕೆ ಬರಬೇಕು ಎಂದು ತಿಳಿಸಿದರು.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂವಿಧಾನ ಇರುವವರೆಗೂ ಯಾವುದೇ ಕ್ಷೇತ್ರದಲ್ಲಿ ಯಾವುದೇ ಕ್ಷೇತ್ರವನ್ನು ಆಯ್ಕೆ ಮಾಡಿಕೊಳ್ಳಲು ಅಂತ ಅವಕಾಶ ಸಂವಿಧಾನ ಕೊಟ್ಟಿದೆ ಜಾತಿಭೇದ ಲಿಂಗ ಭಾವವಿಲ್ಲದೆ ಎಲ್ಲಾ ರೀತಿಯ ಅವಕಾಶಗಳನ್ನು ಕೊಟ್ಟಿದೆ ಸಂವಿಧಾನ ಅದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಸಂವಿಧಾನದ 324ನೇ ವಿಧಿಯನ್ವಯ ಸ್ಥಾಪಿತವಾದ ರಾಷ್ಟ್ರೀಯ ಚುನಾವಣಾ ಆಯೋಗದ ಅಂಗವಾಗಿ ಪ್ರತಿ ವರ್ಷ ಜನವರಿ 25ರಂದು ರಾಷ್ಟ್ರೀಯ ಮತದಾರರ ದಿನ ಆಚರಿಸಲಾಗುತ್ತಿದೆ. ಮತದಾನದ ಮಹತ್ವ, ಯುವ ಮತದಾರರ ಹಕ್ಕುಗಳು ಹಾಗೂ ಚುನಾವಣಾ ಪ್ರಕ್ರಿಯೆಯ ಕುರಿತು ಜಾಗೃತಿ ಜಾಗೃತಿ ಮೂಡಿಸುವುದು ಈ ದಿನದ 5 ಉದ್ದೇಶವಾಗಿದೆ ಎಂದು ಹೇಳಿದರು.
ಯಾವುದೇ ರಾಜಕೀಯ ಪಕ್ಷಗಳು ಹಾಗೂ ಅಭ್ಯರ್ಥಿಗಳು ಚುನಾವಣೆಯ ಸಮಯಗಳಲ್ಲಿ
ನೀಡುವ ಆಸೆ, ಆಮಿಷಗಳಿಗೆ ಒಳಗಾಗದೇ ಸ್ವತಂತ್ರವಾಗಿ, ನಿರ್ಭೀತಿಯಿಂದ ಮತದಾನ ಮಾಡುವ ಮೂಲಕ ದೇಶವನ್ನು ಮುನ್ನಡೆಸುವ ಜನಪ್ರತಿನಿಧಿಗಳನ್ನು ಆಯ್ಕೆ ಮಾಡಬೇಕು ಎಂದು ತಿಳಿಸಿದರು.
ತಹಶಿಲ್ದಾರ್ ಮನೀಷಾ ಎನ್ ಪತ್ರಿ
ಮಾತನಾಡಿ ಬಲಿಷ್ಠ ಪ್ರಜಾಪ್ರಭುತ್ವ ನಿರ್ಮಾಣದಲ್ಲಿ ಯುವ ಮತದಾರರ ಪಾತ್ರ ನಿರ್ಣಾಯಕವಾಗಿದ್ದು, ಯಾವುದೇ ಆಸೆ. ಆಮಿಷಗಳಿಗೆ ಒಳಗಾಗದೆ ವಿವೇಚನೆಯ ಮತದಾನ ಮಾಡಬೇಕು ಹಾಗೂ
ಅರ್ಹ ಯುವ ಮತದಾರರು ಮತದಾರರಾಗಿ ನೋಂದಣಿ ಮಾಡಿಕೊಳ್ಳಲು ವಿಶೇಷ ಅಭಿಯಾನಗಳೊಂದಿಗೆ ಆನ್‌ಲೈನ್ ನೋಂದಣಿಗೂ ಅವಕಾಶ ಕಲ್ಪಿಸಲಾಗಿದೆ
ಎಂದು ಹೇಳಿದರು
18 ವರ್ಷ ತುಂಬಿದ ಎಲ್ಲ ಯುವಕ. ಯುವತಿಯರು ಕಡ್ಡಾಯವಾಗಿ ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ನೋಂದಾಯಿಸಿಕೊಳ್ಳಬೇಕು. ಪ್ರಜ್ಞಾವಂತ ನಾಗರಿಕರು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಮ್ಮ ಮತ, ನಮ್ಮ ಹಕ್ಕು ಎಂದುಕೊಂಡು ಮತದಾನ ಮಾಡಿದರೆ ಭವಿಷ್ಯದ ಉತ್ತಮ ನಾಯಕನನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದೆ ಎಂದರು.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನವು ಅತ್ಯಂತ ಶಕ್ತಿಶಾಲಿ ಆಯುಧ. ಸಾಮಾನ್ಯವಾಗಿ ಮತದಾನದ ದಿನ ರಜೆ ಇರುತ್ತದೆ ಎಂಬ ಕಾರಣಕ್ಕೆ ಜನರು ಪ್ರವಾಸಕ್ಕೆ ಅಥವಾ ವೈಯಕ್ತಿಕ ಕೆಲಸಗಳಲ್ಲಿ ತೊಡಗಿಕೊಳ್ಳುತ್ತಾರೆ. ಪ್ರಜಾಪ್ರಭುತ್ವದ ದೃಷ್ಟಿಯಿಂದ ಆರೋಗ್ಯಕರವಲ್ಲ’ ಎಂದರು. ಇದು
ಈ ಸಂದರ್ಭದಲ್ಲಿ ಹಿರಿಯ ವಕೀಲರಾದ ಎ ಜಿ ಸುಧಾಕರ್, ವಿ ವೆಂಕಟೇಶ್, ವೆಂಕಟನಾರಾಯಣ,
ಸಬ್ ಇನ್ಸ್ಪೆಕ್ಟರ್ ಸುನಿಲ್ ಕುಮಾರ್ , ವಕೀಲರಾದ ನಾಗಭೂಷಣ,
ಬಾಲು ನಾಯಕ್, ಮಲ್ಲಿಕಾರ್ಜುನ, ಬಾಲ ಸರಸ್ವತಿ, ಸಮಾಜ ಕಲ್ಯಾಣ ಇಲಾಖೆಯ ವಾರ್ಡನ್ ನಾಗರಾಜ್, ಪಿ.ವಿ.ವೆಂಕಟರವಣಪ್ಪ .
ಸಿ.ರವಿ ಹಾಗೂ ಕಾಲೇಜು ವಿಧ್ಯಾರ್ಥಿಗಳು ಹಾಜರಿದ್ದರು.
ವರದಿ :ಯಾರಬ್. ಎಂ




