ಬೆಂಗಳೂರು : ಬಿಜೆಪಿಯ ಹಲವು ಶಾಸಕರು ನನ್ನೊಡನೆ ಸಂಪರ್ಕದಲ್ಲಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೊಸ ಬಾಂಬ್ ಸಿಡಿಸಿದ್ದಾರೆ. ಭಾನುವಾರ ಮಾಧ್ಯಮಗಳೊಂದಿಗೆ ಈ ಕುರಿತು ಮಾತನಾಡಿದ ಅವರು, ಸಾಕಷ್ಟು ಮಂದಿ ನನ್ನನ್ನು ಸಂಪರ್ಕಿಸಲು ಈಗಲೂ ಪ್ರಯತ್ನಿಸುತ್ತಿದ್ದಾರೆಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ.
ಈಶ ಫೌಂಡೇಶನ್ ನ ಸದ್ಗುರು ಆಯೋಜಿಸಿದ್ದ ಶಿವರಾತ್ರಿ ಕಾರ್ಯಕ್ರಮದಲ್ಲಿ ಕೇಂದ್ರ ಗೃಹಸಚಿವ ಅಮಿತ್ ಶಾ ಅವರೊಂದಿಗೆ ವೇದಿಕೆ ಹಂಚಿಕೊಂಡ ಕಾರಣಕ್ಕೆ ಡಿ.ಕೆ. ಶಿವಕುಮಾರ್ ಬಿಜೆಪಿ ಸೇರಲಿದ್ದಾರೆ ಎಂಬ ವದಂತಿ ಹರಿದಾಡಿತ್ತು. ಇದಕ್ಕೆ ಪ್ರತಿಕ್ರಿಯಿಸಿರುವ ಡಿಸಿಎಂ ಆಪರೇಷನ್ ಹಸ್ತದ ಸುಳಿವು ನೀಡುವ ಮೂಲಕ ತಿರುಗೇಟು ನೀಡಿದ್ದಾರೆ.
ಕಾಂಗ್ರೆಸ್ ಪಕ್ಷವು ಒಗ್ಗಟ್ಟಿನ ಮನೆ. ಬಿಜೆಪಿಯು ಒಡೆದ ಮನೆಯಾಗಿದೆ. ಬಿಜೆಪಿ ಶಾಸಕರ ಸೇರ್ಪಡೆಯ ಬಗ್ಗೆ ಪಕ್ಷದ ವರಿಷ್ಠರೊಂದಿಗೆ ಚರ್ಚಿಸಿ ಬಳಿಕ ತೀರ್ಮಾನ ಕೈಗೊಳ್ಳಲಾಗುವುದು ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.