ಬೆಳಗಾವಿ: ಗೋಕಾಕ ಮತ್ತು ಪಾಶ್ಚಾಪುರ ರಸ್ತೆಯಲ್ಲಿ ಖಾಸಗಿ ಶಾಲೆಯ ಬಸ್ ಪಲ್ಟಿಯಾದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಘಟನೆಯಲ್ಲಿ ಹಲವು ವಿದ್ಯಾರ್ಥಿಗಳಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಟೇರಿಂಗ್ ಲಾಕ್ ಆಗಿ ಖಾಸಗಿ ಶಾಲೆಯ ಬಸ್ ಪಲ್ಟಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮೇಲ್ಮಟ್ಟಿ ಬಳಿ ಘಟನೆ ನಡೆದಿದ್ದು, ಐವರು ವಿದ್ಯಾರ್ಥಿಗಳಿಗೆ ಗಂಭೀರ ಗಾಯಗಳಾಗಿವೆ.
ಮರಡಿಮಠದ ಜೈ ಹನುಮಾನ್ ಆಂಗ್ಲ ಮಾಧ್ಯಮ ಶಾಲೆಗೆ ಸೇರಿದ ಈ ಬಸ್‌ನಲ್ಲಿ ಸುಮಾರು 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದರು. ಗೋಕಾಕ ಗ್ರಾಮೀಣ ಪೊಲೀಸ್ ಠಾಣಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.