Ad imageAd image

ಹುತಾತ್ಮ ಪೊಲೀಸ್ ಸಿಬ್ಬಂದಿಯ ವಿಮಾ ಮೊತ್ತ 20 ಲಕ್ಷ ರೂ.ಗಳಿಂದ 50 ಲಕ್ಷಕ್ಕೆ ಏರಿಕೆ 

Bharath Vaibhav
ಹುತಾತ್ಮ ಪೊಲೀಸ್ ಸಿಬ್ಬಂದಿಯ ವಿಮಾ ಮೊತ್ತ 20 ಲಕ್ಷ ರೂ.ಗಳಿಂದ 50 ಲಕ್ಷಕ್ಕೆ ಏರಿಕೆ 
WhatsApp Group Join Now
Telegram Group Join Now

ಬೆಂಗಳೂರು : ಪೊಲೀಸ್ ಕುಟುಂಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಹುತಾತ್ಮ ಪೊಲೀಸ್ ಸಿಬ್ಬಂದಿಯ ಗುಂಪು ವಿಮಾ ಮೊತ್ತವನ್ನು ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಹುತಾತ್ಮ ಪೊಲೀಸ್ ಸಿಬ್ಬಂದಿಯ ಗುಂಪು ವಿಮಾ ಮೊತ್ತ 20 ಲಕ್ಷ ರೂಪಾಯಿಯಿಂದ 50 ಲಕ್ಷ ರೂಪಾಯಿಗಳಿಗೆ ಹೆಚ್ಚಳ ಮಾಡಲಾಗಿದೆ.

ಪೊಲೀಸ್ ಇಲಾಖೆಯ ಫಾಲೋಯರ್ ಹುದ್ದೆಯಿಂದ ಮಹಾನಿರ್ದೇಶಕರು ಮತ್ತು ಆರಕ್ಷಕ ಮಾಹಾ ನಿರೀಕ್ಷಕರು ಹುದ್ದೆಯವರೆಗೆ ವಿಶೇಷ ಗುಂಪು ವಿಮಾ ಮೊತ್ತವನ್ನು 20 ಲಕ್ಷದಿಂದ 50 ಲಕ್ಷದವರೆಗೆ ಹೆಚ್ಚಿಸಲಾಗಿದೆ.

ಪ್ರಸಕ್ತ ಚಾಲ್ತಿಯಲ್ಲಿರುವ ವಿಮಾ ಅವಧಿ ಮುಕ್ತಾಯದಿಂದ ನಂತರದ ದಿನಾಂಕದಿಂದ ಜಾರಿಗೆ ಬರುವಂತೆ ಆದೇಶಿಸಲಾಗಿದೆ.

ಈ ಯೋಜನೆಯನ್ನು ವಿಮಾ ಕಂಪನಿಗೆ ವಹಿಸದೇ ಆಕಸ್ಮಿಕ ಅಪಘಾತದಲ್ಲಿ ಮೃತಪಟ್ಟ ಕರ್ತವ್ಯನಿರತ ಪೊಲೀಸ್ ಇಲಾಖೆಯ ಉದ್ಯೋಗಿಗಳ ಕುಟುಂಬಗಳಿಗೆ ನೀಡುವ ವಿಶೇಷ ಗುಂಪು ವಿಮಾ ಮೊತ್ತವನ್ನು ನೇರವಾಗಿ ಇಲಾಖೆಯ ಸಂಬಂಧಪಟ್ಟ ಲೆಕ್ಕ ಶೀರ್ಷಿಕೆಯಡಿ ಪಾವತಿ ಮಾಡಲು ಸೂಚಿಸಿದೆ.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!