Ad imageAd image

ಕಮರಿಗೆ ಬಿದ್ದ ಸೇನಾ ವಾಹನ : ಮೂವರು ಸೇನಾ ಸಿಬ್ಬಂದಿಗಳು ಹುತಾತ್ಮ 

Bharath Vaibhav
ಕಮರಿಗೆ ಬಿದ್ದ ಸೇನಾ ವಾಹನ : ಮೂವರು ಸೇನಾ ಸಿಬ್ಬಂದಿಗಳು ಹುತಾತ್ಮ 
WhatsApp Group Join Now
Telegram Group Join Now

ಜಮ್ಮು,: ಜಮ್ಮು ಮತ್ತು ಕಾಶ್ಮೀರದ ರಂಬನ್ ಜಿಲ್ಲೆಯಲ್ಲಿ ಭಾನುವಾರ ವಾಹನವೊಂದು ರಸ್ತೆಯಿಂದ ಜಾರಿ 700 ಅಡಿ ಆಳದ ಕಮರಿಗೆ ಬಿದ್ದ ಪರಿಣಾಮ ಮೂವರು ಸೇನಾ ಸಿಬ್ಬಂದಿ ಹುತಾತ್ಮರರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ಜಮ್ಮುವಿನಿಂದ ಶ್ರೀನಗರಕ್ಕೆ ತೆರಳುತ್ತಿದ್ದ ಬೆಂಗಾವಲು ಪಡೆಯ ಭಾಗವಾಗಿದ್ದ ಸೇನಾ ಟ್ರಕ್ ಬೆಳಿಗ್ಗೆ 11.30 ರ ಸುಮಾರಿಗೆ ಬ್ಯಾಟರಿ ಚಶ್ಮಾ ಬಳಿ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸೇನೆ, ಪೊಲೀಸ್, ಎಸ್ಡಿಆರ್‌ಎಫ್ ಮತ್ತು ಸ್ಥಳೀಯ ಸ್ವಯಂಸೇವಕರು ತಕ್ಷಣ ಜಂಟಿ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು ಮತ್ತು ವಾಹನದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಸೈನಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಅವರು ಹೇಳಿದರು.

ಮೃತರನ್ನು ಸಿಪಾಯಿಗಳಾದ ಅಮಿತ್ ಕುಮಾರ್, ಸುಜೀತ್ ಕುಮಾರ್ ಮತ್ತು ಮನ್ ಬಹದ್ದೂರ್ ಎಂದು ಗುರುತಿಸಲಾಗಿದ್ದು, ಅವರ ಶವಗಳನ್ನು ಕಮರಿಯಿಂದ ಹೊರತೆಗೆಯಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!