ನವದೆಹಲಿ: ರಾಷ್ಟ್ರ ರಾಜಧಾನಿಯ ಮಹಿಪಲ್ಪುರ್ ಪ್ರದೇಶದ ಹೋಟೆಲ್ನಲ್ಲಿ ಬುಧವಾರ ರಾತ್ರಿ ಬ್ರಿಟಿಷ್ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ದೆಹಲಿ ಪೊಲೀಸರು ಬಂಧಿಸಿದ್ದು, ತನಿಖೆ ಚುರುಕುಗೊಳಿಸಿದ್ದಾರೆ.
“ಸಾಮಾಜಿಕ ಜಾಲತಾಣದ ಮೂಲಕ ಪರಿಚಯವಾದ ಗೆಳೆಯನನ್ನು ಹುಡುಕಿಕೊಂಡು, ಆತನ ಭೇಟಿಗಾಗಿ ಬ್ರಿಟಿಷ್ ಮಹಿಳೆ ಯುಕೆಯಿಂದ ದೆಹಲಿಗೆ ಆಗಮಿಸಿದ್ದರು. ಗೆಳೆಯ ಹಾಗೂ ಆತನ ಸ್ನೇಹಿತನೊಂದಿಗೆ ಮಹಿಳೆ ರಾತ್ರಿ ಭೋಜನದಲ್ಲಿ ಭಾಗಿಯಾಗಿದ್ದರು. ಆ ಬಳಿಕ ಸಾಮೂಹಿಕ ಅತ್ಯಾಚಾರ ನಡೆದಿದೆ” ಎಂದು ತಿಳಿದು ಬಂದಿರುವುದಾಗಿ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.