ಬೆಂಗಳೂರು: -ಪೀಣ್ಯ,ದಾಸರಹಳ್ಳಿ ಕ್ಷೇತ್ರದ ಪೀಣ್ಯ 2ನೇ ಹಂತದಲ್ಲಿ ಹಿಂದೂ ಪರ ಸಂಘಟನೆಗಳ ಪ್ರಮುಖರು ಕಾರ್ಯಕರ್ತರು ಬಾಂಗ್ಲಾದೇಶದ ಹಿಂದೂಗಳ ಮೇಲೆ ದೌರ್ಜನ್ಯ ಖಂಡಿಸಿ ಪೀಣ್ಯ 2ನೇ ಹಂತದ ಶ್ರೀರಾಮ್ ಹೋಟೆಲ್ ಎದುರುಗಡೆ ಹಿಂದೂ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿ ಬಾಂಗ್ಲಾದೇಶದ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಹಿಂದೂಗಳಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿದರು.
ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನರಮೇಧವೇ ನಡೆಯುತ್ತಿದೆ. ಶೇಖ್ ಹಸೀನಾ ವಿರುದ್ದ ಹೋರಾಟ ಹಾಗೂ ಮೀಸಲಾತಿ ವಿರೋಧಿ ಹೋರಾಟಗಳು ಇದೀಗ ಹೊಸ ತಿರುವು ಪಡೆದುಕೊಂಡಿವೆ. ಸುಖಾಸುಮ್ಮನೆ ಅಲ್ಪಸಂಖ್ಯಾತ ಹಿಂದೂಗಳನ್ನು ದಮನ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಹಿಂದೂಗಳ ಮೇಲಿನ ದಾಳಿ ತಡೆಯುವಂತೆ ಪ್ರತಿಭಟನಾಕಾರರು ಘೋಷಣೆ ಕೂಗಿದರು.
ಈ ವೇಳೆ ಮಾತನಾಡಿದ ಹಿಂದೂ ಸಂಘಟನೆಯ ಮುಖಂಡರು ‘ಬಾಂಗ್ಲಾ ದೇಶದಾದ್ಯಂತ ಪ್ರಮುಖವಾಗಿ ಹಿಂದೂಗಳನ್ನೇ ಗುರಿಯಾಗಿಸಿ ದಾಳಿ ನಡೆಯುತ್ತಿದೆ. ಹಿಂದೂ ಮಹಿಳೆಯರು ಹಾಗೂ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಯುತ್ತಿದೆ. ಈ ಅಮಾನವೀಯ ಕೃತ್ಯಗಳನ್ನು ತಕ್ಷಣವೇ ನಿಲ್ಲಿಸಿ ವಿಶ್ವಸಂಸ್ಥೆಯು ಮಧ್ಯಪ್ರವೇಶಿಸಿ ದೌರ್ಜನ್ಯವನ್ನು ತಕ್ಷಣವೇ ನಿಲ್ಲಿಸಬೇಕು’, ಎಂದು ಹೇಳಿದರು.ಈ ಸಂದರ್ಭದಲ್ಲಿ ಹಿಂದೂ ಪರ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಸಾರ್ವಜನಿಕರು ಮುಂತಾದವರು ಇದ್ದರು.
ವರದಿ:- ಅಯ್ಯಣ್ಣ ಮಾಸ್ಟರ್