Ad imageAd image

ಸೆಸ್ಕಾಂ ಅಧಿಕಾರಿಗಳ ವಿರುದ್ಧ ಸಮರ್ಪಕವಾಗಿ ರೈತರಿಗೆ ವಿದ್ಯುತ್ ಪೂರೈಕೆ ಮಾಡುತ್ತಿಲ್ಲ ಎಂದು ಆಗ್ರಹಿಸಿ ರೈತ ಸಂಘದ ವತಿಯಿಂದ ಬೃಹತ್ ಪ್ರತಿಭಟನೆ

Bharath Vaibhav
ಸೆಸ್ಕಾಂ ಅಧಿಕಾರಿಗಳ ವಿರುದ್ಧ   ಸಮರ್ಪಕವಾಗಿ ರೈತರಿಗೆ ವಿದ್ಯುತ್ ಪೂರೈಕೆ ಮಾಡುತ್ತಿಲ್ಲ ಎಂದು ಆಗ್ರಹಿಸಿ ರೈತ ಸಂಘದ ವತಿಯಿಂದ ಬೃಹತ್ ಪ್ರತಿಭಟನೆ
WhatsApp Group Join Now
Telegram Group Join Now

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಪಟ್ಟಣದ ಸೆಸ್ಕಾಂ ಅಧಿಕಾರಿಗಳ ವಿರುದ್ಧ
ಸಮರ್ಪಕವಾಗಿ ರೈತರಿಗೆ ವಿದ್ಯುತ್ ಪೂರೈಕೆ ಮಾಡುತ್ತಿಲ್ಲ ಎಂದು ಆಗ್ರಹಿಸಿ ರೈತ ಸಂಘದ ವತಿಯಿಂದ ಬೃಹತ್ ಪ್ರತಿಭಟನೆ…

ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ವಿವಿಧ ಗ್ರಾಮಗಳಿಗೆ ತಕ್ಕ ಸಮಯಕ್ಕೆ ಸರಿಯಾಗಿ ರೈತರಗಳಿಗೆ ಸಮರ್ಪಕವಾಗಿ ವಿದ್ಯುತ್ ಪೂರೈಕೆ ಮಾಡುತ್ತಿಲ್ಲವೆಂದು ಒತ್ತಾಯಿಸಿ ಪಟ್ಟಣದಲ್ಲಿರುವ ಸಸ್ಕಾಂ ಕಛೇರಿಗೆ ರೈತ ಮುಖಂಡ ಹೊನ್ನೂರು ಪ್ರಕಾಶ್ ನೇತೃತ್ವದಲ್ಲಿ ರೈತರುಗಳು ಮುತ್ತಿಗೆ ಹಾಕಿ ಬೃಹತ್ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ರೈತ ಮುಖಂಡ ಹೊನ್ನೂರ್ ಪ್ರಕಾಶ್ ಮಾತನಾಡಿ ಹನೂರು ತಾಲೂಕಿನ ಸುತ್ತಮುತ್ತಲಿರುವ ಗ್ರಾಮಗಳಿಗೆ ತಕ್ಕ ಸಮಯಕ್ಕೆ ಸರಿಯಾಗಿ ಸೆಸ್ಕಾಂ ಇಲಾಖೆಯಿಂದ ಸಮರ್ಪಕವಾಗಿ ವಿದ್ಯುತ್ ಪೂರೈಕೆ ಮಾಡುತ್ತಿಲ್ಲ.

ಆದ್ದರಿಂದ ರೈತರುಗಳು ಬೆಳೆದ ಬೆಳೆಗಳಿಗೆ ತಕ್ಕ ಸಮಯಕ್ಕೆ ಬೆಸ್ಕಾಂ ಇಲಾಖೆಯವರು ವಿದ್ಯುತ್ ಪೂರೈಕೆ ಮಾಡುತ್ತಿಲ್ಲ ಆದ್ದರಿಂದ ಬೆಳೆದ ಬೆಳೆಗಳಿಗೆ ನೀರು ಪೂರೈಸಲಿಕ್ಕಾಗದೆ ಬೆಳೆಗಳು ಒಣಗಿ ನಾಸವಾಗುತ್ತಿದೆ ಇದರಿಂದ ರೈತರುಗಳಿಗೆ ತುಂಬಲಾರದ ನಷ್ಟವಾಗುತ್ತಿದೆ ಎಂದು ಸೆಸ್ಕಾಂ ಅಧಿಕಾರಿಗಳ ವಿರುದ್ಧ ಕಿಡಿ ಕಾರಿದರು.

ಇದೇ ಸಂದರ್ಭದಲ್ಲಿ ರೈತರುಗಳು ಹನೂರು ಪಟ್ಟಣದ ಸೆಸ್ಕಾಂ ಕಛೇರಿಯ ಮುಂದೆ ಜಮಾಯಿಸಿ ಸೆಸ್ಕಾಂ ಅಧಿಕಾರಿಗಳ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಆಕ್ರೋಶ ವ್ಯಕ್ತಪಡಿಸಿದರು.

ಇದೇ ಸಂದರ್ಭದಲ್ಲಿ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಸೆಸ್ಕಾಂ ಕಚೇರಿಯ ಕಾರ್ಯ ಪಾಲಕ ಇಂಜಿನಿಯರ್ ತಬಾಸುಮ್ ಮಾತನಾಡಿ ರೈತರಗಳಿಗೆ ಸಮರ್ಪಕವಾದ ವಿದ್ಯುತ್ ಪೂರೈಕೆ ಮಾಡುವುದರ ಬಗ್ಗೆ ಕ್ರಮವಿಸಲಾಗುವುದೆಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ವಿವಿಧ ಗ್ರಾಮಗಳಿಂದ ಪ್ರತಿಭಟನೆಗೆ ಆಗಮಿಸಿದ್ದ ರೈತರುಗಳು ಹಾಜರಿದ್ದರು.

ವರದಿ: ನಾಗರಾಜ ವನಳ್ಳಿ

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!